ಜನವಾಹಿನಿ News ಮಡಿಕೇರಿ: ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತುಗಳ ಮಾರಾಟ- ಸರಬರಾಜು ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಕಚೇರಿ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬಂದಿದ್ದು ನಿಷೇಧಿತ ಮಾದಕ ವಸ್ತುಗಳ ಮಾರಾಟ-ಸರಬರಾಜು ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಿಗ್ಗಾಲು ಗ್ರಾಮದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಸೇವನೆ ಕುರಿತು ಖಚಿತ ಮಾಹಿತಿ ಮೇರೆಗೆ ಫೆಬ್ರವರಿ 18 ರಂದು ದಾಳಿ ನಡೆಸಿ ಇಬ್ಬರು ಆರೋಪಿಗಳು ಹಾಗೂ ಕಡಗದಾಳು ಗ್ರಾಮದಲ್ಲಿ ದಿನಾಂಕ 19 ರಂದು ದಾಳಿ ನಡೆಸಿ ಮೂವರು ಆರೋಪಿಗಳನ್ನು ನಿಷೇಧಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ…
ಸದರಿ ಆರೋಪಿಗಳ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 20 (b), 22 NDPS act ಅಡಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.
ಆರೋಪಿಗಳ ವಿವರ:
1-ಕಾರ್ತಿಕ್ 27 ವರ್ಷ ಕಿಗ್ಗಾಲು ಗ್ರಾಮ ಮಡಿಕೇರಿ,
2- ಹರ್ಷವರ್ಧನ್ ಎಚ್. ಡಿ 26 ವರ್ಷ ಬಲಮುರಿ ಗ್ರಾಮ ಮಡಿಕೇರಿ
3- ಸಾಜೀರ್ 39 ವರ್ಷ ನೀರುಕೊಲ್ಲಿ ಗ್ರಾಮ ಮಡಿಕೇರಿ
4- ಶಾರುಕ್ 28 ವರ್ಷ ನೀರುಕೊಲ್ಲಿ ಗ್ರಾಮ ಮಡಿಕೇರಿ
5- ನಿಯಾಸ್ 39 ವರ್ಷ ಇಬ್ಬಿವಳವಾಡಿ ಗ್ರಾಮ ಮಡಿಕೇರಿ
ತನಿಖಾ ತಂಡ : ಸೂರಜ್.ಪಿ.ಎ. ಡಿಎಸ್ಪಿ ಮಡಿಕೇರಿ ಉಪವಿಭಾಗ, ಚಂದ್ರಶೇಖರ್.ಹೆಚ್.ವಿ. ಪಿಐ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ, ಸುಬ್ರಮಣ್ಯ ಪ್ರೋ.ಪಿಎಎಸ್ಐ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ, ವಸಂತ, ಎಎಸ್ಐ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ, ಚರ್ಮಣ್ಣ ಎಎಸ್ಐ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ, ಶ್ರೀ ಪ್ರೇಮ್ ಕುಮಾರ್, ಹೆಚ್ಚಿ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ, ಲೋಕೇಶ್, ಹೆಚ್ಚಿ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ, ಮಹೇಶ್.ಎಂ.ಕೆ, ಹೆಚ್ಚಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ, ಮಧುಸೂದನ್, ಹೆಚ್ಚಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ, ಪ್ರಸನ್ನ ಕುಮಾರ್, ಹೆಚ್ಚಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ, ಉದಯ ಕುಮಾರ್.ಜಿ.ಆರ್, ಹೆಚ್ಚಿ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ, ಹರೀಶ್.ಎಲ್, ಪಿಸಿ,ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ, ಮಂಜುನಾಥ.ಸಿ, ಪಿಸಿ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಸೇರಿದಂತೆ ಸದರಿ ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ.ಆರ್.ಎನ್, ಐಪಿಎಸ್, ಶ್ಲಾಘಿಸಿದ್ದಾರೆ.







