ಮಡಿಕೇರಿಯಲ್ಲಿ ಬಿರುಕು ಬಿಟ್ಟ ಭಾರಿ ತಡೆಗೋಡೆ : ಜಿಲ್ಲಾಧಿಕಾರಿಗಳಿಂದ ಪರಿಶೀಲನೆ
ಮಡಿಕೇರಿ : ಮಡಿಕೇರಿ-ಮಂಗಳೂರು ರಸ್ತೆಗೆ ನಿರ್ಮಿಸಲಾಗಿದ್ದ ಬೃಹತ್ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ವೆಂಕಟರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
2018ರಲ್ಲಿ ಉಂಟಾದ ಪ್ರಾಕೃತಿಕ ವಿಕೋಪದ ಸಂದರ್ಭ ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಭೂ ಕುಸಿತ ಉಂಟಾದ ಹಿನ್ನೆಲೆ ರಸ್ತೆ ಬದಿಗೆ ಬೃಹತ್ ಕಾಂಕ್ರೀಟ್ ತಡೆಗೋಡೆ ನಿರ್ಮಿಸಲಾಗಿತ್ತು. ಇದೀಗ ತಡೆಗೋಡೆಯಲ್ಲಿ ಬೃಹತ್ ಗಾತ್ರದ ಬಿರುಕು ಕಾಣಿಸಿಕೊಂಡಿದ್ದು, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








