ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ದುರ್ಮರಣ
ಮಡಿಕೇರಿ : ಮನೆಯ ಗೋಡೆ ಕುಸಿದು ಬಿದ್ದು ಕಾರ್ಮಿಕ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಅಫ್ಜಲ್ ಪುರದ ರವಿ ಎಂಬುವವರ ಪತ್ನಿ ಸುಷ್ಮಾ(29) ಮೃತ ಮಹಿಳೆ.
ಮೃತ ಮಹಿಳೆ, ಸಹೋದರ ಹಾಗೂ ಮಕ್ಕಳು ಕಳೆದ ಎರಡು ವರ್ಷಗಳ ಹಿಂದೆ ಸೋಮವಾರಪೇಟೆಗೆ ಆಗಮಿಸಿದ್ದು, ಹಾನಗಲ್ಲು ಗ್ರಾಮದ ಸಚಿನ್ ಎ.ಎನ್ ಎಂಬುವವರ ವಾಸದ ಮನೆಯಲ್ಲಿ ಬಾಡಿಗೆ ಇದ್ದರು.
ಇಂದು ಬೆಳಿಗ್ಗೆ 5.30 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಘಟನೆಯಲ್ಲಿ ಮಣ್ಣಿನ ಗೋಡೆ ಕುಸಿದು ಸುಷ್ಮಾ ರವರ ತಲೆ ಭಾಗಕ್ಕೆ ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮನೆಯೊಳಗಿದ್ದ ಸಹೋದರನ ಭುಜದ ಭಾಗಕ್ಕೆ ಪೆಟ್ಟಾಗಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗೆ ಮಡೆಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆದು, ಈ ಮೂರೂ ಮಕ್ಕಳು ಸುರಕ್ಷಿತವಾಗಿದ್ದಾರೆ.








