ಜನವಾಹಿನಿ NEWS ಮಡಿಕೇರಿ : ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಬಿಳಿಗೇರಿ ಸಮೀಪದ ಟಾಟಾ ಕಾಫಿ ತೋಟದಲ್ಲಿ ಬುಧವಾರ ಹೃದಯವಿದ್ರಾವಕ ದುರಂತ ಸಂಭವಿಸಿದೆ. ಕೆಲಸ ಮಾಡುತ್ತಿದ್ದ ವೇಳೆ ವೇಳೆ ಏಕಾಏಕಿ ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರು ಮೃತಪಟ್ಟಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಾದಪುರ ಸಮೀಪದ ಬಿಳಿಗೇರಿಯ ಟಾಟಾ ಕಾಫಿ ತೋಟದಲ್ಲಿ ಕಾರ್ಮಿಕರು ಎಂದಿನಂತೆ ಕೆಲಸದಲ್ಲಿ ತೊಡಗಿದ್ದ ವೇಳೆ ಭಾರಿ ಗಾಳಿ ಮಳೆಗೆ ಮರವೊಂದು ಉರುಳಿ ಬಿದ್ದ ಪರಿಣಾಮ ಅಸ್ಸಾಂ ಮೂಲದ ಪರ್ಬಿನಾ ಖಾತುನ್ (29) ಹಾಗೂ ಅಲೆಮನ್ (48) ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಲ್ಲದೆ, ಜೊತೆಗೆ ಕೆಲಸ ಮಾಡುತ್ತಿದ್ದ ಇನ್ನಿಬ್ಬರು ಕಾರ್ಮಿಕರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಸೋಮವಾರಪೇಟೆ ಠಾಣೆ ಪೊಲೀಸರು ಹಾಗೂ ತಹಶೀಲ್ದಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.






