ಜನವಾಹಿನಿ News ಮಡಿಕೇರಿ : 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರ ಪೊನ್ನಂಪೇಟೆ ಮತ್ತು ಶ್ರೀಮಂಗಲದಲ್ಲಿ ಮಾಸಿಕ ನಿರ್ವಹಣೆ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸುಳುಗೋಡು, ಕೋಣನಕಟ್ಟೆ, ಬಾಳೆಲೆ, ದೇವನೂರು, ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಕುಂದ, ಕಾನೂರು, ದೇವರಪುರ, ಜಾಗಲೆ, ನಿಟ್ಟೂರು, ಕಿರಗೂರು, ಅತ್ತೂರು, ಕಾಯಿಮನೆ, ಮಂಚಳ್ಳಿ, ತೈಲ, ಸಿಂಕೋನ, ಶ್ರೀಮಂಗಲ, ಕುಟ್ಟ, ಕೆಟ್ಟಗೇರಿ, ಹರಿಹರ, ಬಿರುನಾಣಿ, ಕೆ.ಬಾಡಗ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಾರ್ಚ್, 26 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.







