ಜನವಾಹಿನಿ News ಸಿದ್ದಾಪುರ : ಕೊಡಗಿನ ಪ್ರಸಿದ್ಧ ದೇವಾಲಯಗಳಲ್ಲೊಂದಾದ ಸಿದ್ದಾಪುರ ಸಮೀಪದ ಕರಡಿಗೋಡು ಶ್ರೀ ಬಸವೇಶ್ವರ ದೇವಳದ ವಾರ್ಷಿಕ ಉತ್ಸವವು ಇದೇ ಮಾರ್ಚ್ 29 ರಿಂದ 31ರ ವರೆಗೆ ನಡೆಯಲಿದೆ ಎಂದು ದೇವಾಲಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಮಾ.29 ರಂದು ಸಂಜೆ ಗೋ ಪೂಜೆ, ನಿತ್ಯ ಪೂಜೆಯ ನಂತರ 7:30 ಗಂಟೆಗೆ ಭಂಡಾರದ ಮನೆಯಿಂದ ದೇವರ ಭಂಡಾರವನ್ನು ದೇವಸ್ಥಾನಕ್ಕೆ ತರುವುದು
ಮಾ. 30 ರಂದು ಬೆಳಗ್ಗೆ 8-30 ಕ್ಕೆ ಗಣಪತಿ ಹೋಮ, 10:00 ಕ್ಕೆ ಕಲಶ ಪೂಜೆ,11:00ಕ್ಕೆ ಗಂಗಾ ಸ್ನಾನ ,ಕಾವೇರಿ ನದಿಯಿಂದ ಶ್ರೀ ಬಸವೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆ, ಮಧ್ಯಾಹ್ನ 12:30 ಕ್ಕೆ ಮಹಾಪೂಜೆ, ತೀರ್ಥ ಪ್ರಸಾದ ನಂತರ ಅನ್ನ ಸಂತರ್ಪಣೆ. 3:30ಕ್ಕೆ ದೇವರ ಮನೆ ಮೆರವಣಿಗೆ, ಸಂಜೆ 7 ಗಂಟೆಗೆ ಕೊಂಡ ಪೂಜೆ
ಮಾ. 31 ರಂದು ಬೆಳಗ್ಗೆ 8:00ಗಂಟೆಗೆ ರುದ್ರಪಾರಾ ಯಣ, 10 ಗಂಟೆಗೆ ದೇವತಾ ಪ್ರಾರ್ಥನೆ, ಗಂಗಾ ಪೂಜೆ, ಗಂಗಾ ಸ್ನಾನ, ನಂತರ ಶ್ರೀ ಬಸವೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆ, ಕೊಂಡ ಸೇವೆ, ಮಹಾಪೂಜೆ, ಹರಕ್ಕೆ ಒಪ್ಪಿಸುವುದು, ತೀರ್ಥ ಪ್ರಸಾದ, ಅನ್ನ ಸಂತರ್ಪಣೆ, ಮಂತ್ರಾಕ್ಷತೆ ನಡೆಯಲಿದೆ.
ಬಸವೇಶ್ವರ ದೇವಾಲಯದ ವಾರ್ಷಿಕೋತ್ಸವದ ಪೂಜಾ ಕೈಕಂಕರ್ಯಗಳಲ್ಲಿ ಭಕ್ತಾದಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಆಡಳಿತ ಮಂಡಳಿ ಕೋರಿದೆ.







