Breaking News :

ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು


ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲಿಯೇ ಸಾವು


ಕುಶಾಲನಗರ : ಶಿರಂಗಾಲ ಶ್ರೀ ಮಂಟಿಗಮ್ಮ ದೇವಾಲಯ ಪ್ರವೇಶದ್ವಾರದ ತಿರುವಿನಲ್ಲಿ ಬುಧವಾರ ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಪಿರಿಯಾಪಟ್ಟಣ ತಾಲ್ಲೂಕು ಕಣಗಾಲು ಹೋಬಳಿಯ ಚಾಮರಾಯನಕೋಟೆ ಗ್ರಾಮದ ನಿವಾಸಿ ಅಶೋಕ್(36) ಮೃತ ದುರ್ದೈವಿಯಾಗಿದ್ದಾನೆ.

ಕೊಣನೂರು ಕಡೆಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಲಾರಿ ಹಾಗೂ ಶಿರಂಗಾಲದಿಂದ ಕೊಣನೂರು ಕಡೆಗೆ ಹೋಗುತ್ತಿದ್ದ ಬೈಕ್ ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಡಿವೈಎಸ್ಪಿ ಚಂದ್ರಶೇಖರ್, ವೃತ್ತ ನಿರೀಕ್ಷಕ ದಿನೇಶ್ ಹಾಗೂ ಸಂಚಾರಿ ಠಾಣಾಧಿಕಾರಿ ಶ್ರೀನಿವಾಸ್, ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು .ಲಾರಿ ಚಾಲಕನನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸ್ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಮೃತ ಅಶೋಕ್ ಪತ್ನಿ ರಂಜಿತಾ. ಮಕ್ಕಳದ ಸಮರ್ಥ್ ಹಾಗೂ ಸಾನ್ವಿ ಸೇರಿದಂತೆ ಕುಟುಂಬಸ್ಥರು. ಅಗಲಿದ್ದಾರೆ.

 

Share this article

ಟಾಪ್ ನ್ಯೂಸ್

More News