ಜನವಾಹಿನಿ News ಸಿದ್ದಾಪುರ : ಸಿದ್ದಾಪುರ ವ್ಯಾಪ್ತಿಯ ಗುಹ್ಯ,ಕೂಡುಗದ್ದೆ, ಅವರೆಗುಂದ ,ಮಾಲ್ದಾರೆ ಸೇರಿದಂತೆ ವಿವಿಧ ಕಡೆಗಳಲ್ಲಿ ಒಟ್ಟು 1 ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎಎಸ್ ಪೊನ್ನಣ್ಣ ಚಾಲನೆ ನೀಡಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಅವರು ಕ್ಷೇತ್ರ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಸರಕಾರವು ವಿಶೇಷ ಅನುದಾನವನ್ನು ನೀಡುತ್ತಿರುವುದರಿಂದ ವಿರಾಜಪೇಟೆ ಕ್ಷೇತ್ರದ ಬಹುತೇಕ ಗ್ರಾಮೀಣ ರಸ್ತೆಗ ಳಕಾಮಗಾರಿಗಳು ಪೂರ್ಣಗೊಂಡಿದೆ. ರಾಜ್ಯ ಹೆದ್ದಾರಿಗಳ ಕಾಮಗಾರಿಯು ಡಾಂಬರುಗಳ ಕೊರತೆಯಿಂದ ವಿಳಂಬವಾಗಿದ್ದು ಆದಷ್ಟು ಬೇಗ ಕಾಮಗಾರಿಗಳು ಪೂರ್ಣಗೊಳ್ಳಲಿದೆ ಎಂದರು.ಅಲ್ಲದೆ ಸಿದ್ದಾಪುರ ವ್ಯಾಪ್ತಿಯ ಬಹುತೇಕ ರಸ್ತೆಗಳು ಕಾಂಕ್ರೀಟ್ ರಸ್ತೆಗಳಾಗಿ ಮಾರ್ಪಾಡಾಗಿದ್ದು ಉಳಿದ ರಸ್ತೆಗಳಿಗೂ ಕ್ರಿಯಾಯೋಜನೆಯನ್ನು ರೂಪಿಸುವ ಮೂಲಕ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಮಾಡಲಾಗುವುದೆಂದರು.
ಈ ಸಂಧರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ವಿರಾಜಪೇಟೆ ತಾಲ್ಲೂಕು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮತೀನ್, ಸಿದ್ದಾಪುರ ವಲಯ ಅಧ್ಯಕ್ಷ ಪ್ರತೀಶ್, ಮಾಜಿ ಜಿ.ಪಂ ಸದಸ್ಯ ವೆಂಕಟೇಶ್, ಪ್ರಮುಖರುಗಳಾದ ಶುಕೂರು, ಜಾಫರ್, ದೇವಜಾನು, ಬಶೀರ್ ಸೇರಿದಂತೆ ಇನ್ನಿತರರು ಹಾಜರಿದ್ದರು.







