ರಸ್ತೆ ಗುಂಡಿ ಮುಚ್ಚಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ : ವಿಡಿಯೋ ವೈರಲ್ – ಎಲ್ಲೆಡೆ ಬಾರಿ ಪ್ರಶಂಸೆ ವ್ಯಕ್ತ
ಜನವಾಹಿನಿ NEWS ಮಡಿಕೇರಿ : ನಗರದ ಪ್ರಮುಖ ಪ್ರವಾಸಿ ತಾಣವಾದ ಅಬ್ಬಿ ಜಲಪಾತಕ್ಕೆ ತೆರಳುವ ರಸ್ತೆಯು ಭಗವತಿ ನಗರದ ಸಮೀಪ ಗುಂಡಿಮಯವಾಗಿದ್ದನ್ನು ಮನಗಂಡ ಕರ್ತವ್ಯದಲ್ಲಿರುವ ಮಡಿಕೇರಿ ಸಂಚಾರಿ ಪೊಲೀಸ್ ಸಿಬ್ಬಂದಿಯೊಬ್ಬರು ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿರುವ ದೃಶ್ಯವನ್ನು ಸಾರ್ವಜನಿಕರೊಬ್ಬರು ವಿಡಿಯೋ ಮಾಡಿ ಹಂಚಿಕೊಂಡಿದ್ದಾರೆ. ಇದೀಗ ವಿಡಿಯೋ ವೈರಲ್ ಆಗಿದ್ದು, ಪೊಲೀಸ್ ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
ಇಲ್ಲಿದೆ ನೋಡಿ ವಿಡಿಯೋ
👇▶️







