ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂ ಕೋರ್ಟಿನಿಂದ ಮಹತ್ವದ ತೀರ್ಪು – ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಮಂದಿಯ ಜಾಮೀನು ರದ್ದು : ಮತ್ತೆ ಜೈಲು ಸೇರಲಿರುವ ಆರೋಪಿಗಳು
ಬೆಂಗಳೂರು : ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಸದ್ಯ ಇದನ್ನು ಪ್ರಶ್ನಿಸಿ ಸರ್ಕಾರ, ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಸದ್ಯ ಇದೀಗ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು ನಟ ದರ್ಶನ್, ಪವಿತ್ರಾ ಗೌಡ ಹಾಗೂ 7 ಆರೋಪಿಗಳ ಜಾಮೀನು ಅನ್ನು ರದ್ದು ಮಾಡಿದೆ.
ಇವತ್ತು ಸುಪ್ರೀಂ ಕೋರ್ಟ್ನಲ್ಲಿ ರೇಣುಕಾಸ್ವಾಮಿ ಪ್ರಕರಣದ ಆರೋಪಿ ದರ್ಶನ್, ಪವಿತ್ರಾಗೌಡ ಹಾಗೂ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರದ ಅರ್ಜಿಯ ಆದೇಶ ಹೊರ ಬಿದ್ದಿದೆ. ಹೈಕೋರ್ಟ್ ತೀರ್ಪಿನಲ್ಲಿ ದೋಷವಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಪ್ರಕರಣವನ್ನು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ನ್ಯಾಯಾಮೂರ್ತಿ ಮಹಾದೇವನ್ ಪೀಠ ತೀರ್ಪು ನೀಡಿದೆ.
ಅದರೊಂದಿಗೆ ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡಿದ್ದ ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡಿದ್ದ ಕಾರಣಕ್ಕಾಗಿಯೇ ಕಿಲ್ಲಿಂಗ್ ಸ್ಟಾರ್‌ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಈಗ ಜಾಮೀನು ರದ್ದು ಮಾಡಿದ ಬೆನ್ನಲ್ಲಿಯೇ ದರ್ಶನ್ ಈಗ ಬಳ್ಳಾರಿ ಜೈಲಿಗೆ ಪುನಂ ವಾಪಾಸ್ ಹೋಗಬೇಕಾಗಿದೆ.
ಜೈಲಿನಲ್ಲಿ ಕೊಲೆ ಆರೋಪಿಗೆ ವಿಶೇಷ ಆತಿಥ್ಯ ನೀಡಿದ್ದ ವಿಚಾರಕ್ಕೆ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ಜೆ ಪರ್ದಿವಾಲಾ, ‘ನೀವು ಯಾರಿಗಾದರೂ ವಿಐಪಿ ಅತಿಥ್ಯ ನೀಡಲಾಗುತ್ತಿರುವ ಬಗ್ಗೆ ಛಾಯಾಚಿತ್ರಗಳು ಅಥವಾ ವೀಡಿಯೊವನ್ನು ನಾವು ನೋಡಿದರೆ, ಮೊದಲು ನಿಮ್ಮನ್ನು ಸಮನ್ಸ್ ಮಾಡಲಾಗುತ್ತದೆ’ ಎಂದು ಹೇಳಿದ್ದು. ಜೈಲು ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ತಾಕೀತು ಮಾಡಿದ್ದು, ಯಾವುದೇ ಕಾರಣಕ್ಕೂ ಜೈಲಿನಲ್ಲಿ ಆರೋಪಿಗ:ಇಗೆ ರಾಜಾತಿಥ್ಯ ನೀಡಬಾರದು ಎಂದಿದೆ.
ರಾಜಾತಿಥ್ಯ ನೀಡಿರುವ ಬಗ್ಗೆ ನಾನು ಎಜಿ ಜೊತೆ ಮಾತನಾಡಿ ತಿಳಿಸುತ್ತೇನೆ ಎಂದು ರಾಜ್ಯ ಸರ್ಕಾರದ ಪರ ವಕೀಲ ಸಿದ್ಧಾರ್ಥ್ ಲೂತ್ರಾ ತಿಳಿಸಿದರು. ಈ ತೀರ್ಪಿನ ಪ್ರತಿಯನ್ನು ಎಲ್ಲಾ ಹೈಕೋರ್ಟ್‌ಗಳು ಮತ್ತು ರಾಜ್ಯ ಸರ್ಕಾರಗಳಿಗೆ ನೀಡುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಲಾಗಿದೆ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.








