ವಸತಿ ಶಾಲೆ ನಿರ್ಮಾಣಕ್ಕೆ ಸರ್ಕಾರದಿಂದ ಅನುಮೋದನೆ : ಸಚಿವರಿಗೆ ಧನ್ಯವಾದ ಸಲ್ಲಿಸಿದ ಮಂತರ್ ಗೌಡ
ಮಡಿಕೇರಿ : ಸೋಮವಾರಪೇಟೆ ತಾಲ್ಲೂಕಿನ ಚನ್ನಾಪುರದಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ‘ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ’ ವತಿಯಿಂದ 6 ನೇ ತರಗತಿಯಿಂದ 12 ನೇ ತರಗತಿಯವರೆಗೆ 37.55 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ವಸತಿ ಶಾಲೆ ನಿರ್ಮಿಸಲು ಕರ್ನಾಟಕ ರಾಜ್ಯ ಸರ್ಕಾರದಿಂದ ಅನುಮೋದನೆಗೊಂಡ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ್ ಲಾಡ್ ರವರನ್ನು ಮಡಿಕೇರಿ ಕ್ಷೇತ್ರದ ಶಾಸಕರಾದ ಮಂತರ್ ಗೌಡ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದರು.








