ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್ ವಿತರಣೆ
ಮಡಿಕೇರಿ : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 8 ಮಂದಿ ನೋಂದಣಿಯಾದ ವೆಲ್ಡಿಂಗ್ ಕಾರ್ಮಿಕರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವೆಲ್ಡಿಂಗ್ ಕಿಟ್‍ಗಳನ್ನು ವಿತರಿಸಿದರು. ವಿರಾಜಪೇಟೆಯ ಪಂಜರಪೇಟೆಯಲ್ಲಿರುವ ಶಾಸಕರ ಗೃಹ ಕಚೇರಿಯಲ್ಲಿ ಕಿಟ್‍ಗಳನ್ನು ವಿತರಿಸಲಾಯಿತು. ಈ ಸಂದರ್ಭ ಸೋಮವಾರಪೇಟೆ ಹಾಗೂ ವಿರಾಜಪೇಟೆ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕ ಎಸ್.ಶಶಿಧರ್, ಮಡಿಕೇರಿ ವೃತ್ತ ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ. ಯತ್ನಟ್ಟಿ, ವಿರಾಜಪೇಟೆ ಹಾಗೂ ಮಡಿಕೇರಿ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯ ಸಿಬ್ಬಂದಿಗಳು ಹಾಜರಿದ್ದರು.








