ಜನವಾಹಿನಿ NEWS ಮಡಿಕೇರಿ : ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ನೂತನ ಉಪಾಧ್ಯಕ್ಷರಾಗಿ ಮಂಡೇಟಿರ ಅನಿಲ್ ಅಯ್ಯಪ್ಪ ರವರನ್ನು ಆಯ್ಕೆ ಮಾಡಿ ಆದೇಶ ಪತ್ರವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ ನವರು ಹಸ್ತಾಂತರಿಸಿದರು.
ಮಂಡೇಟಿರ ಅನಿಲ್ ಅಯ್ಯಪ್ಪ ಹಲವು ವರ್ಷಗಳಿಂದ ಕಾಕೋಟುಪರಂಬು ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಆದೇಶ ಪತ್ರ ಹಸ್ತಾಂತರ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾದ ಶ್ರೀ ಪಟ್ಟಡ ರಂಜಿ ಪೂಣಚ್ಚ, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರಾದ ಮತೀನ್, ಮಾಜಿ ಪುರಸಭೆ ಅಧ್ಯಕ್ಷೆ ಶ್ರೀಮತಿ ದೇಚಮ್ಮ ಕಾಳಪ್ಪ, ಪಕ್ಷದ ಮುಖಂಡರಾದ ಜೋಕಿಮ್, ಮಚ್ಚಾರಂಡ ಕಿರಣ್, ವಿರಾಜಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಬೀರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Total Views: 6






