ಜನವಾಹಿನಿ News ವಿರಾಜಪೇಟೆ : ಕೊಡಗಿನ ವಿರಾಜಪೇಟೆ ತಾಲೂಕಿನ ಕಕ್ಲೂರು-ಚೆಂಬೆಬೆಳ್ಳೂರು ಭಾಗದಲ್ಲಿ ದಾಂಧಲೆ ನಡೆಸುತ್ತಿದ್ದ ಸುಮಾರು 35 ವರ್ಷದ ಒಂಟಿ ಸಲಗ (ಕಾಡಾನೆ) ಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ (ಮಾ.22, 2026) ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.
ಸಾಕಾನೆಗಳ ಸಹಾಯದಿಂದ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ, ಪಶುವೈದ್ಯ ಡಾ. ರಮೇಶ್ ನೇತೃತ್ವದಲ್ಲಿ ಅರವಳಿಕೆ ಮದ್ದು ನೀಡಿ ಸೆರೆಹಿಡಿಯಲಾದ ಆನೆಯನ್ನು ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ.
ದುಬಾರೆ ಹಾಗೂ ಮತ್ತಿಗೋಡು ಶಿಬಿರದ ಸಾಕಾನೆಗಳಾದ ಅಭಿಮನ್ಯು, ಮಹೇಂದ್ರ, ಕಂಜನ್, ಭೀಮ, ಸುಗ್ರೀವ ಮತ್ತು ಹರ್ಷ ಸೇರಿದಂತೆ 100 ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.







