ಶಿಕ್ಷಕಿ ಬಿ.ಬಿ ಜಾಜಿ ಅವರಿಗೆ ಕಾವೇರಿ ರತ್ನ ಪ್ರಶಸ್ತಿ
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಜಾಜಿ ಬಿ.ಬಿ ಅವರು ಕಾವೇರಿ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ, ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್, ಸಂಗಮ ಟಿ.ವಿ., ವಂಶಿ ನ್ಯೂಸ್ ಹಾಗೂ ರಾಷ್ಟ್ರೀಯ ಅಪರಾದ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ ಬೆಂಗಳೂರು ಇವರ ಸಹಯೋಗದೊಂದಿಗೆ ನಡೆಯಲಿರುವ ಅಂತರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ನೀಡಲಾಗುವ ಕಾವೇರಿ ರತ್ನ ಪ್ರಶಸ್ತಿಗೆ ಬಿ ಬಿ ಜಾಜಿ ಆಯ್ಕೆಯಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಕಳೆದ 29 ವರ್ಷಗಳ ಸುದೀರ್ಘ ಸೇವೆಯಲ್ಲಿ ಜಿಲ್ಲೆ ಹಾಗೂ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ವಿಜೇತೆಯಾಗಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ರಾಜ್ಯ, ರಾಷ್ಟ್ರ, ಅಂತ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಹಲವಾರು ಬಹುಮಾನಗಳನ್ನು ಪಡೆದು ಕ್ರೀಡಾ ಸಾಧನೆ ಮಾಡಿರುವ ಇವರು ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಸೇವಾದಳದಲ್ಲೂ ಸೇವೆಯನ್ನು ಮಾಡುತ್ತಿದ್ದು, ವಿವಿಧ ಸಂಘ-ಸಂಸ್ಥೆಗಳಿಂದಲೂ ಸನ್ಮಾನಿಸಿ ಗೌರವಿಸಲ್ಪಟ್ಟಿದ್ದು, ಹಲವಾರು ಪ್ರಶಸ್ತಿಗಳು ಲಭಿಸಿದೆ.








