ಜನವಾಹಿನಿ NEWS ಮಡಿಕೇರಿ : ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಸಮೀಪ ಕಡೆಪಾಲ ಎಂಬಲ್ಲಿ ಕಾರು ಮತ್ತು ಟ್ಯಾಂಕರ್ ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಟ್ಯಾಂಕರ್ ಮತ್ತು ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ನೆಲ್ಯಹುದಿಕೇರಿ ಗ್ರಾಮದ ಶೋಭಾ ಮಹಿಳೆ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ತುತ್ತಾದ ಕಾರು ಗಾಯಾಳುಗಳಿಗೆ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತಿದೆ







