ಸಂಸ್ಕೃತಿ, ಆಚಾರ-ವಿಚಾರ ಹಾಗೂ ಆಚರಣೆಗಳ ಉಳಿವಿಗೆ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳು ಸಹಕಾರಿ : ಶಾಸಕ ಪೊನ್ನಣ್ಣ
ಮಡಿಕೇರಿ : ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳು ನಮ್ಮ ಸಂಸ್ಕೃತಿ, ಆಚಾರ-ವಿಚಾರ ಹಾಗೂ ಆಚರಣೆಗಳನ್ನು ಮುಂದಿನ ಪೀಳಿಗೆ ಮುಂದುವರೆಸಲು ಅನುಕೂಲ ಎಂದು ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅಭಿಪ್ರಾಯಪಟ್ಟಿದ್ದಾರೆ.
ಪೊನ್ನಂಪೇಟೆ ತಾಲೂಕು ಗೋಣಿಕೊಪ್ಪಲುವಿನ ಪಾಮ್ ವ್ಯಾಲಿ ರೆಸಾರ್ಟ್ ನಲ್ಲಿ, ಕಾವೇರಿ ಪೊಮ್ಮಕ್ಕಡ ಕೂಟ ಆಯೋಜಿಸಿದ ಕಕ್ಕಡ ನಮ್ಮೆ ಕಾರ್ಯಕ್ರಮದಲ್ಲಿ, ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಕಾವೇರಿ ಪೊಮ್ಮಕ್ಕಡ ಕೂಟವು, ಹಲವಾರು ವರ್ಷಗಳಿಂದ ಕೊಡಗಿನ ಹಾಗೂ ಕೊಡವರ ಸಂಸ್ಕೃತಿಯನ್ನು ಪೋಷಿಸುತ್ತಾ ಬೆಳೆಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಮಾತ್ರವಲ್ಲದೆ ಮಹಿಳೆಯರು ಸಹ ಸಮಾಜಕ್ಕೆ ತಮ್ಮದೇ ಕೊಡುಗೆ ನೀಡಲು ಸಹಕಾರಿಯಾಗುತ್ತಿದೆ ಎಂದು ಶ್ಲಾಘಿಸಿದ ಶಾಸಕರು ಸಮುದಾಯಕ್ಕೆ ಪೊಮ್ಮಕ್ಕಡ ಕೂಟದ ಕೊಡುಗೆ ಹೀಗೆ ಮುಂದುವರೆಯಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಕಾವೇರಿ ಪೊಮ್ಮಕ್ಕಡ ಕೂಟದ ಅಧ್ಯಕ್ಷರಾದ ಕೊಟ್ಟಂಗಡ ವಿಜು ದೇವಯ್ಯ, ಆಡಳಿತ ಮಂಡಳಿ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.








