Breaking News :

ಸಕಾಲದಲ್ಲಿ ದೊರೆಯುವಂತೆ ಕ್ರಮವಹಿಸಿ: ನ್ಯಾಯಾಧೀಶೆ ಶುಭ

 


ಜನವಾಹಿನಿ ನ್ಯೂಸ್ ಮಡಿಕೇರಿ : ಹಿರಿಯರು ಸಂತಸದಿಂದ ಇರುವ ಮನೆಯೇ ಉತ್ತಮ ಸಮಾಜ ನಿರ್ಮಾಣಕ್ಕೆ ಕಾರಣವಾಗಿದ್ದು, ಅವರಿಗೆ ಗೌರವದ ಜೊತೆಗೆ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು ಎಲ್ಲರ ಜವಾಬ್ದಾರಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಹೇಳಿದರು.

ನಗರದ ಗಾಂಧಿ ಭವನದಲ್ಲಿ ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ-2007 ಕುರಿತು ನಡೆದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯರ ಆಸ್ತಿ ಹಕ್ಕು ಮತ್ತು ನಿರ್ವಹಣಾ ಸೌಲಭ್ಯಗಳನ್ನು ವಿಳಂಬವಿಲ್ಲದೆ ಒದಗಿಸಲು ಅಧಿಕಾರಿಗಳು ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದರು.

ಪೊಲೀಸ್ ನೆರವು : ಮಹಿಳಾ ಠಾಣೆಯ ಸಿಪಿಐ ಉಮೇಶ್ ಕುಮಾರ್ ಮಾತನಾಡಿ, ಹಿರಿಯ ನಾಗರಿಕರ ಸುರಕ್ಷತೆಗೆ ಬೀಟ್ ವ್ಯವಸ್ಥೆ ಮೂಲಕ ನಿಗಾ ವಹಿಸಲಾಗಿದೆ. ತೊಂದರೆ ಎದುರಾದಲ್ಲಿ 1090, 112 ಸಹಾಯವಾಣಿಗೆ ಕರೆ ಮಾಡುವಂತೆ ತಿಳಿಸಿದರು.

ವಕೀಲರಾದ ಮೀನಾ ಕುಮಾರಿ, ಮನೋಜ್ ಬೋಪಯ್ಯ ಅವರು ಕಾಯ್ದೆಯ ಕುರಿತು ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಸುಮಂಗಲಾ ಹಿರೇಮನಿ ಅಧ್ಯಕ್ಷತೆ ವಹಿಸಿದ್ದರು.

Share this article

ಟಾಪ್ ನ್ಯೂಸ್

More News