ಸಿದ್ದಾಪುರ : ನಾಳೆ ಕಾಡಾನೆಗಳನ್ನು ಕಾಡಿಗೆ ಅಟ್ಟಿಸುವ ಕಾರ್ಯಾಚರಣೆ
ಸಿದ್ದಾಪುರ : ವಿರಾಜಪೇಟೆ ಅರಣ್ಯ ವಲಯದ ವ್ಯಾಪ್ತಿಗೆ ಬರುವ ಗ್ರಾಮಗಳಾದ ಅಮ್ಮತ್ತಿ ಪುಲಿಯೇರಿ ಇಂಜಿಲಗರೆ ಕರಡಿಗೋಡು ಸಿದ್ದಾಪುರ ಬೀಡುಬಿಟ್ಟಿರುವ ಕಾಡಾನೆಗಳನ್ನು ಮರಳಿ ಕಾಡಿಗೆ ಅಟ್ಟಿಸುವ ಕಾರ್ಯಾಚರಣೆ ಜು.29ರಂದು ನಡೆಯಲಿದೆ.
ತೋಟದ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸುವಂತೆ ಹಾಗೂ ಗ್ರಾಮಸ್ಥರು ಶಾಲಾ ಮಕ್ಕಳು ಮತ್ತು ವಾಹನ ಚಾಲಕರು ಎಚ್ಚರಿಕೆಯಿಂದ ಇದ್ದು ಕಾಡಾನೆ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆಯೊಂದಿಗೆ ಸಹಕರಿಸಬೇಕು ಹಾಗೂ ಈ ಸಮಯದಲ್ಲಿ ಸಾರ್ವಜನಿಕರು ಪಟಾಕಿಗಳನ್ನು ಸಿಡಿಸಬಾರದೆಂದು ವಿರಾಜಪೇಟೆ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.








