Breaking News :

ಸಿದ್ದಾಪುರ; ಗಾಂಜಾ ಮಾರಾಟ, ಇಬ್ಬರ ಬಂಧನ


ಜನವಾಹಿನಿ News ಸಿದ್ದಾಪುರ : ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ನೆಲ್ಲಿಹುದಿಕೇರಿ ನಿವಾಸಿ ಅನ್ಸದ್ ಹಾಗೂ ಸಿದ್ದಾಪುರ ನಿವಾಸಿ ಅಫ್ರಿದ್ ಬಂಧಿ ಆರೋಪಿಗಳು.

ನೆಲ್ಲಿಹುದಿಕೇರಿ ಗ್ರಾಮದ ಬೆಟ್ಟದ ಕಾಡು ದೇವಾಲಯದ ಬಳಿ ಸ್ಕೂಟರ್‌ನಲ್ಲಿ ಗಾಂಜಾವನ್ನಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ಖಚಿತ ಸುಳಿವಿನ ಮೇರೆಗೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ಅವರಿಂದ 324 ಗ್ರಾಂ ಗಾಂಜಾವನ್ನು ಕೃತ್ಯಕ್ಕೆ ಬಳಸಿದ ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿಂದು ಮಣಿ ಮಾರ್ಗದರ್ಶನ, ಮಡಿಕೇರಿ ಡಿವೈಎಸ್ಪಿ ಸೂರಜ್, ವೃತ್ತ ನಿರೀಕ್ಷಕ ರಾಜು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್, ಸಿಬ್ಬಂದಿಗಳಾದ ರಾಜೇಶ್, ಮಣಿಕಂಠ, ಹನೀಫ್ ಪಾಲ್ಗೊಂಡಿದ್ದರು.

Share this article

ಟಾಪ್ ನ್ಯೂಸ್

More News