ಜನವಾಹಿನಿ News ಸಿದ್ದಾಪುರ : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಐತಿಹಾಸಿಕ ಜಯಗಳಿಸುವುದರೊಂದಿಗೆ ಕಾಂಗ್ರೆಸ್ ಮತ್ತಿತರ ಮಿತ್ರ ಪಕ್ಷಗಳ ಬೆಂಬಲದೊಂದಿಗೆ ನಟ-ರಾಜಕಾರಣಿ ಸಿ.ಜೋಸೆಫ್ ವಿಜಯ್ ಅವರು ಮೇ 10ರಂದು ಭಾನುವಾರ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಈ ಐತಿಹಾಸಿಕ ಕ್ಷಣವನ್ನು ಸಿದ್ದಾಪುರದಲ್ಲೂ ಅವರ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
ಪಟ್ಟಣದ ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ, ವಿಜಯ್ ಪರ ಜಯ ಘೋಷಗಳನ್ನು ಕೂಗುವ ಮೂಲಕ ಸಂಭ್ರಮಿಸಿದರು.
ಈ ಸಂದರ್ಭ ವಿಜಯ್ ಅವರ ಅಭಿಮಾನಿ ಹಾಗೂ ಜೈ ಭೀಮ್ ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ರವಿ ಹಾಗೂ ಉಪಾಧ್ಯಕ್ಷ ಮಹದೇವ, ಡಿಸಿಸಿ ಸದಸ್ಯ ಶೂಕುರ್ ಪ್ರಮುಖರಾದ ಪ್ರಭು, ಜಗ್ಗು, ರವಿ, ಟೋನಿ, ಮಂಜ, ಜಂಬೂಲಿ, ಜಾಫು, ಸುರೇಶ್ ಮತ್ತಿತರರು ಪಾಲ್ಗೊಂಡಿದ್ದರು.
Total Views: 12






