ಸೆ.13 ರಂದು ರಾಷ್ಟ್ರೀಯ ಲೋಕ ಅದಾಲತ್
ಮಡಿಕೇರಿ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸೆಪ್ಟೆಂಬರ್, 13 ರಂದು ರಾಜ್ಯದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ಅದರಂತೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್, 13 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ.








