ಜನವಾಹಿನಿ NEWS ಸೋಮವಾರಪೇಟೆ: ತಾಲೂಕಿನ ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ವತಿಯಿಂದ ಇಂದು 186ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಸಮೀಪದ ಬೆಟ್ಟದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಾಲೊಮನ್ ಡೇವಿಡ್ ಮಾತನಾಡಿ ಪ್ರತಿ ವರ್ಷದಂತೆ ಇ ಬಾರಿಯು ಸರ್ಕಾರಿ ಶಾಲಾ ಮಕ್ಕಳೊಂದಿಗೆ ವಿಶ್ವ ಛಾಯಾಗ್ರಹಣ ದಿನಾಚರಣೆ ಆಚರಿಸಿಕೊಂಡು ಬರುತ್ತಿದ್ದೇವೆ. ಮಕ್ಕಳಿಗೆ ಅಗತ್ಯವಾಗುವ ವಸ್ತುಗಳನ್ನು ನೀಡುವುದರ ಜೊತೆಗೆ, ಈ ದಿನದ ಮಹತ್ವ ಮತ್ತು ಉದ್ದೇಶವನ್ನು ತಿಳಿಸುವ ಮೂಲಕ ವಿದ್ಯಾರ್ಥಿಗಳಿಗೆ ಹೆಚ್ಚು ಜ್ಞಾನವನ್ನ ನೀಡುವುದರಲ್ಲಿ ಇದೊಂದು ನಮ್ಮ ಪ್ರಯತ್ನ ಎಂದರು.
ಗೌರವಾಧ್ಯಕ್ಷ ಜನಾರ್ಧನ್ ಮಾತನಾಡಿ ಛಾಯಾಗ್ರಹಣ ಕೇವಲ ಕಲೆಯಲ್ಲ, ಸಮಾಜಮುಖಿ ಕಾರ್ಯಗಳ ಮೂಲಕ ಜನಜಾಗೃತಿ ಮೂಡಿಸುವ ಶಕ್ತಿಯಾಗಿದೆ. ಸಂಘದ ಈ ಸೇವಾಭಾವ ಮನೋಭಾವ ಇತರ ಸಂಘಟನೆಗಳಿಗೆ ಮಾದರಿಯಾಗಿದೆ ಎಂದರು.
ನಂತರ ಶಾಲಾ ಮಕ್ಕಳಿಗೆ ಸ್ವೆಟರ್‌ಗಳು, ಲೇಖನ ಸಾಮಗ್ರಿಗಳು, ಟೈ-ಬೆಲ್ಟ್‌ಗಳು ಹಾಗೂ ವಾಟರ್‌ಬಾಟಲ್‌ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ದೀಪು, ಖಜಾಂಚಿ ಅರುಣ್, ಜಿಲ್ಲಾ ಸಂಘದ ನಿರ್ದೇಶಕ ಹರೀಶ್ ಕೋಟ್ಯನ್,ಮಾಜಿ ಅಧ್ಯಕ್ಷ ಸುಬ್ರಮಣಿ, ನಿರ್ದೇಶಕರಾದ ನವೀನ್,ಸಲೀಂ,ಮಂಜುನಾಥ್, ರಾಜು,ಸದಸ್ಯರಾದ ಧರ್ಮ ಮತ್ತು ಶೇಷಪ್ಪ,ಶಾಲೆಯ ಮುಖ್ಯಶಿಕ್ಷಕಿ ವಿದ್ಯಾ ಹಾಗೂ ಶಿಕ್ಷಕಿ ಕವಿತಾ ಇದ್ದರು.







