ಸ್ನೇಹಿತರ ಒಕ್ಕೂಟದಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಟೈ, ಬೆಲ್ಟ್ ಕೊಡುಗೆ
ಮಡಿಕೇರಿ : ವಿರಾಜಪೇಟೆ ಸ್ನೇಹಿತರ ಒಕ್ಕೂಟದ ಸದಸ್ಯರು ವಿರಾಜಪೇಟೆಯ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಅಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸರಿಸುಮಾರು 25 ಮಕ್ಕಳಿಗೆ ಟೈ ಬೆಲ್ಟ್ ಹಾಗೂ ಶಿಕ್ಷಕರಿಗೆ ಟೇಬಲ್ ಅನ್ನು ಕೊಡುಗೆಯಾಗಿ ನೀಡಿದ್ದಾರೆ.
ಈ ಸಂದರ್ಭ ಸ್ನೇಹಿತರ ಒಕ್ಕೂಟ ಪ್ರಮುಖರಾದ ಮಹಮ್ಮದ್ ನಯಾಜ್, ಹಬೀಬುಲ್ಲಾ ಶರೀಫ್, ಝೀಯಾವುಲ್ಲ, ಝಬಿವುಲ್ಲಾ, ಜಿಶಾನ್ ಉಪಸ್ಥಿತರಿದ್ದರು.








