ಹವಾಮಾನ ಇಲಾಖೆಯಿಂದ ಮಳೆ ಅಬ್ಬರದ ಮುನ್ಸೂಚನೆ : ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ
ಕೊಡಗು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಇದೀಗ ಮತ್ತೆ ಶುರುವಾಗಿದ್ದು, ಹವಾಮಾನ ಇಲಾಖೆ (IMD) ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದೆ.
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದಿಂದ ರೆಡ್ ಅಲರ್ಟ್ ಘೋಷಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಗಾಳಿಯೂ 40-50ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.
ಜೊತೆಗೆ ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.
ಬೆಂಗಳೂರು, ಮಂಡ್ಯ, ರಾಮನಗರ ಸೇರಿದಂತೆ ಇನ್ನುಳಿದ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.








