Breaking News :

ಹಾರಂಗಿ ನೀರಿನ ಸಮರ್ಪಕ ನಿರ್ವಹಣೆಗೆ ಸೂಚನೆ

ಕೊಡಗು : ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು ಅವರ ಅಧ್ಯಕ್ಷತೆಯಲ್ಲಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನ ಕಾವೇರಿ ನೀರಾವರಿ ನಿಗಮದ ಕೇಂದ್ರ ಕಚೇರಿಯಲ್ಲಿ ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆಯು ಗುರುವಾರ ನಡೆಯಿತು.

ಹಾರಂಗಿ ಅಚ್ಚುಕಟ್ಟು ಪ್ರದೇಶಗಳ ಸ್ಥಿತಿಗತಿ, ಜಲಾಶಯದ ಪ್ರಸ್ತುತ ನೀರಿನ ಮಟ್ಟದ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆಯಲಾಯಿತು. ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಯೋಜಿತವಾಗಿ ನಾಲೆಗಳಿಗೆ ನೀರು ಹರಿಸುವ ಮೂಲಕ, ಸಮಪರ್ಕವಾಗಿ ನೀರಿನ ನಿರ್ವಹಣೆಯನ್ನು ಮಾಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಸಭೆಯಲ್ಲಿ ಶಾಸಕರಾದ ಎ.ಮಂಜು, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share this article

ಟಾಪ್ ನ್ಯೂಸ್

More News