ಜನವಾಹಿನಿ News ಮಡಿಕೇರಿ : ಶನಿವಾರ ಬಲ್ಲಮಾವಟಿಯಲ್ಲಿ ಆಯೋಜಿಸಲಾದ ಹಿಂದೂ ಸಂಗಮ ಕಾರ್ಯಕ್ರಮದ ನಿಮಿತ್ತ ಪ್ರಚಾರ ಕಾರ್ಯ ಕೈಗೊಳ್ಳುತ್ತಿದ್ದ ಹಿಂದೂ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ ನಡೆಸಿದ್ದನ್ನು ಕೊಡಗು ಮೈಸೂರು ಲೋಕಸಭಾ ಸದಸ್ಯರಾದ ಯದುವೀರ್ ಒಡೆಯರ್ ರವರು ಖಂಡಿಸಿದ್ದಾರೆ.
ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಮಾಹಿತಿ ತಿಳಿದ ಕೂಡಲೇ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಘಟನೆಯ ವಿವರವನ್ನು ಪಡೆದಿದ್ದು, ಶನಿವಾರ ನಡೆಯುವ ಹಿಂದೂ ಸಂಗಮ ಸಮಾವೇಶಕ್ಕೆ ಹೆಚ್ಚಿನ ಭದ್ರತೆಯನ್ನು ನೀಡುವಂತೆ ತಿಳಿಸಿದ್ದಾರೆ.






