Breaking News :

ಹೆಲಿಕಾಪ್ಟರ್ ದುರಂತದಲ್ಲಿ ಕರ್ನಾಟಕದ 5 ಜನ ಸಾವು – ಮೃತದೇಹ ತರಲು ಸರ್ಕಾರದಿಂದ ಪ್ರಯತ್ನ


ಜನವಾಹಿನಿ ನ್ಯೂಸ್ ಬೆಂಗಳೂರು : ಉತ್ತರಾಖಂಡದ ಬದರಿನಾಥದಿಂದ ಡೆಹ್ರಾಡೂನ್‌ಗೆ ತೆರಳುತ್ತಿದ್ದ ‘ಟ್ರಾನ್ಸ್ ಭಾರತ್ ಏವಿಯೇಷನ್’ ಸಂಸ್ಥೆಯ ಸಿವಿಲ್ ಹೆಲಿಕಾಪ್ಟರ್ ಇಂದು ಮಧ್ಯಾಹ್ನ ಸುಮಾರು 2 ಗಂಟೆಗೆ ಹಾಥಿ ಪರ್ವತ ಪ್ರದೇಶದ ಬಳಿ ಪತನಗೊಂಡಿದೆ.

ಈ ದುರಂತದಲ್ಲಿ ಕರ್ನಾಟಕದ ಐವರು ಪ್ರಯಾಣಿಕರು ಹಾಗೂ ಓರ್ವ ಪೈಲಟ್ ಸೇರಿದಂತೆ ಒಟ್ಟು ಆರು ಜನರು ಮೃತಪಟ್ಟಿದ್ದಾರೆ ಎಂದು ಉತ್ತರಾಖಂಡ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ಮಾಹಿತಿ ನೀಡಿದೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಸೇನೆ, SDRF, ITBP, ಪೊಲೀಸ್ ಮತ್ತು ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ತೆರಳಿ ಎಲ್ಲಾ 6 ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಜೋಶಿಮಠಕ್ಕೆ ರವಾನಿಸಿವೆ.

ಮೃತರ ಪಾರ್ಥಿವ ಶರೀರಗಳನ್ನು ಆದಷ್ಟು ಬೇಗ ಕರ್ನಾಟಕಕ್ಕೆ ತರಲು ಮುಖ್ಯಮಂತ್ರಿಗಳ ಕಚೇರಿ, ಕರ್ನಾಟಕ ವಿಪತ್ತು ನಿರ್ವಹಣಾ ಆಯುಕ್ತರು ಹಾಗೂ ದೆಹಲಿಯ ಕರ್ನಾಟಕ ಭವನದ ರೆಸಿಡೆಂಟ್ ಕಮಿಷನರ್ ಕಚೇರಿ ಉತ್ತರಾಖಂಡ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು KSDMA ಆಯುಕ್ತ ಹೊನ್ನಾಂಬ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article

ಟಾಪ್ ನ್ಯೂಸ್

More News