Breaking News :

ಹೊದ್ದೂರು ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ

 

 

ಹೊದ್ದೂರು ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ


ಮಡಿಕೇರಿ : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂರ್ನಾಡು ಶಾಖೆ ಇವರ ಸಹಯೋಗದೊಂದಿಗೆ ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮದಲ್ಲಿ, ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಕೇಂದ್ರ ಸರಕಾರದ ಆದೇಶದಂತೆ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಆರ್ಥಿಕ ಸಾಕ್ಷರತಾ ಕಾರ್ಯಕ್ರಮ ನಡೆಸುತ್ತಿರುವ ಅವಾರ್ಡ್ ಸಂಸ್ಥೆಯ ಜಿಲ್ಲಾ ಸಂಯೋಜಕರಾಗಿರುವ ಕೆ.ಎ.ಆಸೀಫ್ ಅವರು, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣ ಮಾಹಿತಿ ಮತ್ತು ಉಪಯೋಗ ತಿಳಿದುಕೊಂಡು ಇದುವರೆಗೂ ಯೋಜನೆ ಮಾಡಿಸಿಕೊಳ್ಳದೆ ಇರುವವರು ಶೀಘ್ರದಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಕೋರಿದರು.

ವಿಶೇಷವಾಗಿ ಕೊಡಗು ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭದಲ್ಲಿ ಅತೀ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು ಇಂತಹ ಸಂದರ್ಭದಲ್ಲಿ ಇದು ಅತೀ ಉಪಯೋಗಕರ ಎಂದು ತಿಳಿಸಿದರು.

ಮೊಬೈಲ್ ಪೆÇೀನಿನಲ್ಲಿ ಬ್ಯಾಂಕ್‍ನಿಂದ ಅಂತ ಹೇಳಿ ಒಟಿಪಿ ಮತ್ತು ಕೆವೈಸಿ ಕೇಳಿ ಬರುವ ಕರೆಗಳು ಸೈಬರ್ ವಂಚಕರ ಜಾಲವಾಗಿದ್ದು, ಗ್ರಾಹಕರು ಪೆÇೀನಿನ ಮುಖಾಂತರ ಮಾಹಿತಿ ಹಂಚಿಕೊಳ್ಳಬಾರದು ಎಂದು ತಿಳಿಸಿದರು.

ಅನಾಮಧೇಯ ಕರೆಗಳು ಲಿಂಕ್‍ಗಳನ್ನು ಒತ್ತುವ ಮೂಲಕ ಸ್ಪಂದನೆ ನೀಡದಂತೆಯೂ ಸೈಬರ್ ವಂಚಕರ ಬಲೆಯಿಂದ ಎಚ್ಚರ ವಹಿಸಬೇಕು. ಕಣ್ಣು ತಪ್ಪಿನಿಂದ ಮೋಸ ಜರುಗಿದರೆ ಕೂಡಲೆ 1930 ಗೆ ಕರೆಮಾಡುವ ಮುಖಾಂತರ ಸೈಬರ್ ವಂಚಕರಿಗೆ ಕಡಿವಾಣ ಹಾಕಬೇಕೆಂದು ಮಾಹಿತಿ ನೀಡಿದರು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂರ್ನಾಡು ಶಾಖೆಯ ವ್ಯವಸ್ಥಾಪಕರಾದ ಅಶ್ವಿನ್ ಕುಮಾರ್ ಅವರು ಮಾತನಾಡಿ ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾಯೋಜನೆ, ಮತ್ತು ಪ್ರಧಾನಮಂತ್ರಿ ಜೀವನ್ ಜ್ಯೋತಿ ಭಿಮಾ ಯೋಜನೆ ಸಂಪೂರ್ಣ ಮಾಹಿತಿ ನೀಡಿದರು.

ಅಲ್ಲದೆ 60 ವಯಸ್ಸು ಆದ ನಂತರದಲ್ಲಿ ಪಿಂಚಣಿರೂಪದಲ್ಲಿ 1000 ರೂ ಗಳಿಂದ 5000 ರೂ ಗಳ ವರೆಗಿನ ಪಿಂಚಣಿ ಹಣ ಸಿಗಬೇಕಾದರೆ ಈವಾಗಲೇ ಅಟಲ್ ಪಿಂಚಣಿ ಯೋಜನೆಯಡಿ ಹೆಸರು ನೋಂದಣಿ ಮಾಡಿಸುವಂತೆ ಅವಾರ್ಡ ಸಂಸ್ಥೆಯ ಮಡಿಕೇರಿ ತಾಲ್ಲೂಕು ಕೌನ್ಸಿಲರಾದ ಬಿ.ಎ.ಅಂಬಿಕಾ ಅವರು ತಿಳಿಸಿದರು.

ಯೋಜನೆಯ ಸಂಪೂರ್ಣ ಮಾಹಿತಿ ನೀಡುವುದರೊಂದಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಬೆಂಗಳೂರು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ನಬಾರ್ಡ್ ನ ಆರ್ಥಿಕ ನೆರವಿನೊಂದಿಗೆ ಕೊಡಗು ಜಿಲ್ಲೆಯಲ್ಲಿ ಅವಾರ್ಡ್ ಎನ್ನುವ ಸಂಸ್ಥೆಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪ್ರತೀ ತಾಲೂಕುಗಳಲ್ಲಿ ಮಾಡುತ್ತಿದ್ದು ಇದರ ಮುಖ್ಯ ಉದ್ದೇಶವೂ ಕೂಡ ಆಗಿದೆ ಎಂದರು.

ಸಾಮಾಜಿಕ ಭದ್ರತಾ ಯೋಜನೆ ಮಾಡಿಸುವುದು, ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್ ಪೇಮೆಂಟ್ ಬಗ್ಗೆ ಮಾಹಿತಿ ನೀಡುವುದೇ ಆಗಿದೆ ಎಂದರು.

ಮಡಿಕೇರಿ ಕಾವೇರಿ ಲೇಔಟ್ ಮತ್ತು ವಿರಾಜಪೇಟೆಯ ಸುಭಾμï ನಗರದಲ್ಲಿ ಆರ್ಥಿಕ ಸಾಕ್ಷರತಾ ಕೇಂದ್ರಗಳ ಕಚೇರಿ ಇದ್ದು, ಹೆಚ್ಚಿನ ಮಾಹಿತಿಗೆ ಕಚೇರಿ ಸಂಪರ್ಕಿಸುವಂತೆ ತಿಳಿಸಿದರು.

ಹೊದ್ದೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಎಚ್.ಎ.ಹಂಸ ಅವರು ಮಾತನಾಡಿ ಈ ರೀತಿ ಕಾರ್ಯಕ್ರಮ ಮಾಡುವುದರಿಂದ ಮಾತ್ರ ಗ್ರಾಮೀಣ ಭಾಗದ ಜನರಿಗೆ ಬ್ಯಾಂಕಿನಲ್ಲಿರುವ ಯೋಜನೆಗಳ ಮಾಹಿತಿ ಲಭ್ಯವಾಗಲಿದೆ ಎಂದರು.

ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಅಬ್ದುಲ್ಲಾ ಕೆ.ಎ. ಅವರು ಮಾತನಾಡಿ ಲೀಡ್ ಬ್ಯಾಂಕ್ ಮಡಿಕೇರಿ ಮತ್ತು ಅವಾರ್ಡ್ ಸಂಸ್ಥೆಯವರು ಎಲ್ಲಾ ಪಂಚಾಯತಿಗಳಿಗೆ ತೆರಳಿ ಮಾಡುವ ಈ ಕಾರ್ಯಕ್ರಮಕ್ಕೆ ನಾವು ಮೆಚ್ಚಲೇ ಬೇಕಾಗಿದ್ದು ಮನೆ ಬಾಗಿಲಿಗೆ ಬಂದು ಬ್ಯಾಂಕಿನ ಮಾಹಿತಿ ನೀಡುವುದು ಸಂತೋಷದ ವಿಷಯವಾಗಿದೆ ಎಂದು ತಮ್ಮ ಅಭಿಪ್ರಾಯ ತಿಳಿಸಿದರು.

ಹೊದ್ದೂರು ಗ್ರಾಮ ಪಂಚಾಯತಿ ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ ಅಧ್ಯಕ್ಷರಾದ ಮೊಣ್ಣಪ್ಪ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ಎಂ.ಬಿ.ಹಮೀದ್, ಗ್ರಾಮ ಆಡಳಿತ ಅಧಿಕಾರಿಗಳಾದ ಸಂತೋμï ಪಾಟೀಲ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂರ್ನಾಡು ಶಾಖೆಯ ವ್ಯವಸ್ಥಾಪಕರಾದ ಅಶ್ವಿನ್ ಕುಮಾರ್, ಗ್ರಾ.ಪಂ.ಸದಸ್ಯರಾದ ಪಾರ್ವತಿ, ಚೌರೀರ ನವೀನ್ ಮತ್ತು ಲಕ್ಷ್ಮಿ ಉಪಸ್ಥಿತರಿದ್ದರು.

Share this article

ಟಾಪ್ ನ್ಯೂಸ್

More News