ಜನವಾಹಿನಿ News ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2025 ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟಿಸಲಾಗಿದೆ.
ಇದೇ ಮಾರ್ಚ್ 14 ರಂದು ಮಂಗಳೂರಿನ ಊರ್ವ ಸ್ಟೋರ್ ಸಮೀಪದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ಪ್ರಶಸ್ತಿಯು 50 ಸಾವಿರ ರೂ.ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಅನಂತರಾಜ ಗೌಡ (ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರ), ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಲೋಕೇಶ್ವರಿ ವಿನಯ ಚಂದ್ರ (ಅರೆಬಾಷಿಕ ಸಂಘಟನಾ ಕ್ಷೇತ್ರ) ಮತ್ತು ಕೊಡಗು ಜಿಲ್ಲೆ ಮಡಿಕೇರಿಯ ಕಟ್ರತನ ಲಲಿತ ಅಯ್ಯಣ್ಣ (ಅರೆಭಾóಷೆ ಸಾಹಿತ್ಯ ಕ್ಷೇತ್ರ) ಇವರುಗಳನ್ನು ಆಯ್ಕೆ ಮಾಡಲಾಗಿದೆ.
ಮಂಗಳೂರಿನಲ್ಲಿ ಮಾರ್ಚ್ 14 ರಂದು ನಡೆಯುವ ಸಮಾರಂಭದಲ್ಲಿ ಅಕಾಡೆಮಿ ಪ್ರಕಟಿತ ಪುಸ್ತಕಗಳ ಬಿಡುಗಡೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲಾವಿದರಿಗೆ ವಾದ್ಯ ಪರಿಕರಗಳ ವಿತರಣೆ ಹಾಗೂ ಅರೆಭಾಷೆ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಅಕಾಡೆಮಿ ಅದ್ಯಕ್ಷರಾದ ಸದಾನಂದ ಮಾವಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







