Breaking News :

ಆಂಗ್ಲೋ ವರ್ನಾಕ್ಯುಲರ್ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕೆ ಗಣ್ಯರ ಮೆಚ್ಚುಗೆ

 


ಜನವಾಹಿನಿ News ಸಿದ್ದಾಪುರ: ನೆಲ್ಲಿಹುದಿಕೇರಿ ಆಂಗ್ಲೋ ವರ್ನಾಕ್ಯುಲರ್ ಶಾಲೆಯ 34ನೇ ವಾರ್ಷಿಕೋತ್ಸವ ಸಂಭ್ರಮ ವಿವಿಧ ಸಾಂಸ್ಕೃತಿಕ, ಆರೋಗ್ಯ,ಪರಿಸರ ಕಾಳಜಿ,, ಮಾದಕ ವಸ್ತುಗಳ ವಿರುದ್ಧ ಜಾಗೃತಿ ಸೇರಿದಂತೆ ಸಾಮಾಜಿಕ, ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನೆರವೇರಿತು.

ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ  ವೈದ್ಯಕೀಯ ವಿಜ್ಞಾನ ಸಂಸ್ಥೆ, ಜನರಲ್ ಸರ್ಜರಿ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಸತೀಶ್ ವಿ ಶಿವಮಲ್ಲಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆಚಾರ ವಿಚಾರ ಸಂಸ್ಕೃತಿ ಪರಂಪರೆಯೊಂದಿಗೆ ಭಾವೈಕ್ಯತೆಯ ಸಂದೇಶ ಸಾರುವ ಮೂಲಕ ಸೌಹಾರ್ದ ಸಮಾಜ ನಿರ್ಮಾಣ ಮಾಡಲು ಇಂತಹ ಕಾರ್ಯಕ್ರಮಗಳು ಅತ್ಯವಶ್ಯಕವಾಗಿದ್ದು, ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಪೋಷಕರ ಸಹಕಾರ ಅತ್ಯಗತ್ಯವಾಗಿದೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ ಈ ಶಿಕ್ಷಣ ಸಂಸ್ಥೆ ಮಾಡುತ್ತಿದ್ದು, ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತ ಪದವಿಯೊಂದಿಗೆ ಹುದ್ದೆಗಳನ್ನು ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಂಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೆ ಕಲಿಕೆಯ ಮೂಲಕ ಪ್ರತಿಭಾನ್ವಿತರಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದರು.

ಸಮಾಜ ಸೇವಕ ವಕೀಲ ಕುಂಞಿ ಅಬ್ದುಲ್ಲಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿ ಸಾಧಿಸುವ ಚಲದೊಂದಿಗೆ ಉನ್ನತ ಶಿಕ್ಷಣದ ಮೂಲಕ ಪ್ರತಿಭಾನ್ವಿತರಾಗಿ ಗುರುತಿಸಿಕೊಂಡಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ.

ನೀವು ಕಲಿತ ಶಿಕ್ಷಣವು ನಿಮ್ಮ ಹೆಸರಿನೊಂದಿಗೆ ಸೇರಿಕೊಳ್ಳುತ್ತದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂಬ ಕಾರಣದಿಂದ ಶಾಲೆಯನ್ನು ಪ್ರಾರಂಭಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ಅಕ್ಷರವನ್ನು ಕಲಿಸಿ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಶಿಕ್ಷಣ ಸಂಸ್ಥೆ ಮುಂದಾಗಿರೋದು ಹೆಮ್ಮೆಯ ವಿಷಯ ಹಲುವು ವರ್ಷಗಳಿಂದಲೂ ಶೇ100ರಷ್ಟು ಫಲಿತಾಂಶದೊಂದಿಗೆ ವಿದ್ಯಾರ್ಥಿಗಳನ್ನ ಪ್ರತಿಭಂತರವಾಗಿ ಮಾಡುತ್ತಿರುವ ಶಿಕ್ಷಕರುಗಳ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಾಗಿ ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕೆಂದು ಹೇಳಿದ ಅವರು ಅಪರಾಧ ತಡೆ ಮಸಾಚರಣೆಯ ಅಂಗವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಮಾದಕ ವಸ್ತುಗಳ ಮಾರಾಟ ಸೇವನೆಗಳ ಬಗ್ಗೆ ಇಲಾಖೆಗೆ ಮಾಹಿತಿ ನೀಡಿ. ಬಾಲ್ಯ ವಿವಾಹ, ಪೋಕ್ಸೋ ಸೇರಿದಂತೆ ಇತರ ಕಾಯ್ದೆ ಗಳ ಬಗ್ಗೆ ಅರಿವು ಜಾಗೃತಿ ಮೂಡಿಸಿದರು.

ಶಾಲಾ ಮುಖ್ಯಸ್ಥ ಮಣಿ ಮೊಹಮ್ಮದ್ ಮಾಸ್ಟರ್ ಮಾತನಾಡಿ ಶಾಲೆಯಲ್ಲಿ ಕಲಿತ ಅದೆಷ್ಟೋ ವಿದ್ಯಾರ್ಥಿಗಳು ಪದವಿ ಶಿಕ್ಷಣ ಮೂಲಕ ಉನ್ನತ ಹುದ್ದೆಯನ್ನು ಪಡೆದು ಉತ್ತಮ ಭವಿಷ್ಯ ರೂಪಿಸಿಕೊಂಡಿದ್ದಾರೆ.

ವೈದ್ಯಕೀಯ, ಕಾನೂನು, ಇಂಜಿನಿಯರಿಂಗ್ ಕಲಿಯುವ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಕೆಗೆ ಪ್ರೋತ್ಸಾಹ ನೀಡಲಾಗುವುದು ಎಂದರು.

ವಾರ್ಷಿಕೋತ್ಸವ ಅಂಗವಾಗಿ ನಡೆದ ವಿದ್ಯಾರ್ಥಿಗಳ ಸಾಂಸ್ಕೃತಿಕ ನೃತ್ಯ ಪ್ರದರ್ಶನ ನೆರೆದಿದ್ದ ಪೋಷಕರ ಗಮನ ಸೆಳೆದರು.

ಇದೇ ಸಂದರ್ಭ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಭಾನ್ವಿತರಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭ ಕಲಾವಿದ ಭಾವ ಮಾಲ್ಧಾರೆ ಶಾಲಾ ಮುಖ್ಯ ಶಿಕ್ಷಕಿ ಕೆ ಆರ್ ಅನಿತಾ, ದೈಹಿಕ ಶಿಕ್ಷಕ ಬಿ ವಿ ಕಿರಣ್ ಕುಮಾರ್ ಸೇರಿದಂತೆ ಶಾಲಾ ಶಿಕ್ಷಕರುಗಳು, ಪೋಷಕರು, ವಿದ್ಯಾರ್ಥಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Share this article

ಟಾಪ್ ನ್ಯೂಸ್

More News