Breaking News :

ಮಂಗಳೂರು; ಚಲಿಸುತ್ತಿದ್ದ ಬಸ್ ನಲ್ಲಿ ವಿದ್ಯಾರ್ಥಿನಿಗೆ ಕಾಣಿಸಿಕೊಂಡ ಎದೆನೋವು; ಸಮಯಪ್ರಜ್ಞೆ ಮೆರೆದ ಬಸ್ ಚಾಲಕ, ಕಂಡೆಕ್ಟರ್

ಮಂಗಳೂರಿನ ಕೂಳೂರು ಎಂಬಲ್ಲಿ ಚಲಿಸುತ್ತಿದ್ದ ಬಸ್​​ನಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಹೃದಯಾಘಾತವಾಗಿದ್ದು, ಚಾಲಕ ಹಾಗೂ ನಿರ್ವಹಾಕ ಸಿನಿಮೀಯ ಮಾದರಿಯಲ್ಲಿ ಆಸ್ಪತ್ರೆಗೆ ಸಾಗಿಸಿ ಜೀವ ಉಳಿಸಿದ್ದಾರೆ.

ಮಂಗಳೂರಿನ ಕೂಳೂರು ಮಾರ್ಗಸಲ್ಲಿ ಎಂದಿನಂತೆ ಕೃಷ್ಣ ಪ್ರಸಾದ್ ಬಸ್ ಪ್ರಯಾಣಿಕರೊಂದಿಗೆ ತೆರಳುತ್ತಿದ್ದಾಗ ಕಾಲೇಜು ವಿದ್ಯಾರ್ಥಿನಿಯೊಬ್ಬರಲ್ಲಿ ಹಠಾತ್ ಹೃದಯಾಘಾತದ ಲಕ್ಷಣಗಳು ಕಾಣಿಸಿವೆ. ತಕ್ಷಣವೇ ಬಸ್ ಚಾಲಕ ಗಜೇಂದ್ರ ಕುಂದರ್ ಮತ್ತು ಕಂಡಕ್ಟರ್ ಮಹೇಶ್ ಪೂಜಾರಿ ಬಸ್ ಅನ್ನು ತುರ್ತಾಗಿ ಎಮರ್ಜೆನ್ಸಿ ಸೈರನ್ ಚಾಲೂ ಮಾಡಿ ಕೇವಲ 6 ನಿಮಿಷಗಳಲ್ಲಿ 6 ಕಿಲೋಮೀಟರ್ ದೂರ ಕ್ರಮಿಸಿ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ತಲುಪಿಸಿದ್ದಾರೆ‌. ಈ ಮೂಲಕ ಬಾಲಕಿಯ ಜೀವ ಉಳಿಸಲು ನೆರವಾಗಿದ್ದಾರೆ‌.

ಇದೀಗ ಚಾಲಕ ಮತ್ತು ನಿರ್ವಾಹಕನ ಮಾನವೀಯತೆ ಮತ್ತು ಸಮಯಪ್ರಜ್ಞೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ‌.

 

 

Share this article

ಟಾಪ್ ನ್ಯೂಸ್

More News