Breaking News :

ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡೆ ಕುಸಿತ; ಸಂಚಾರ ಬಂದ್

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡೆ ಕುಸಿತ ಸಂಭವಿಸಿದ್ದು, ಸಂಚಾರ ಬಂದ್ ಆಗಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ಮಾಣಿ- ಮೈಸೂರು ಹೆದ್ದಾರಿಯ ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಇದರ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಗುಡ್ಡ ಕುಸಿತದ ವೇಳೆ ವಾಹನ ಸಂಚಾರ ಇಲ್ಲದಿರುವುದರಿಂದ ಸಂಭವನೀಯ ಅನಾಹುತ ತಪ್ಪಿದಂತಾಗಿದೆ. ಸದ್ಯ ಮಡಿಕೇರಿ ಹಾಗೂ ಮೈಸೂರು ಕಡೆಗೆ ಪ್ರಯಾಣಿಸುವವರಿಗೆ ಬದಲಿ ರಸ್ತೆಯಾಗಿ ಪುತ್ತೂರು ಸಿಟಿ ಮೂಲಕ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

Share this article

ಟಾಪ್ ನ್ಯೂಸ್

More News