ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಹೊರಗಡೆ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಯೋಗಿ ಆದಿತ್ಯನಾಥ್ ಅವರ ಜನತಾ ದರ್ಬಾರ್ನಿಂದ ಹೊರಬಂದ ಕೂಡಲೇ ಮಹಿಳೆ ಗೌತಮಪಲ್ಲಿ ಪೊಲೀಸ್ ಠಾಣೆ ಪ್ರದೇಶದ ವಿಕ್ರಮಾದಿತ್ಯ ಮಾರ್ಗದ 19 ಬಿಡಿ ಜಂಕ್ಷನ್ ಬಳಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಅಂಜಲಿ ಜಾತವ್ ಎಂದು ಹೇಳಲಾಗಿದೆ.
ಪೊಲೀಸ್ ಸಿಬ್ಬಂದಿ ಬೆಂಕಿಯನ್ನು ಕಂಬಳಿ ಬಳಸಿ ನಂದಿಸಿದ್ದಾರೆ. ಮಹಿಳೆಯನ್ನು ತ್ವರಿತವಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಬೆಂಕಿ ನಂದಿಸುವ ಹೊತ್ತಿಗೆ, ಮಹಿಳೆಗೆ 80% ಸುಟ್ಟ ಗಾಯಗಳಾಗಿದ್ದವು. ಅವಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
Total Views: 6






