ಸಿಎಂ ಸಿದ್ದರಾಮಯ್ಯ’ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.
ಬೆಂಗಳೂರು, ಮಂಗಳೂರು , ಚಿಕ್ಕಬಳ್ಳಾಪುರ, ಹಾವೇರಿ, ದಾವಣಗೆರೆ, ಮೈಸೂರು ಸೇರಿ ರಾಜ್ಯದ ವಿವಿಧೆಡೆ ಪ್ರತಿಭಟನೆ ತೀವ್ರಗೊಂಡಿದೆ.
ರಾಜ್ಯಪಾಲ ಗೆಹ್ಲೋಟ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಮಂಗಳೂರಿನಲ್ಲಿ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಲವು ಕಡೆ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಇನ್ನೂ ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಕೂಡ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು,, ಘೋಷಣೆ ಕೂಗಿ ರಾಜ್ಯಪಾಲರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ.
ನಗರದ ಗಾಂಧಿ ವೃತ್ತ ಸಮೀಪ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕರು, ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ನಡೆಯನ್ನು ಖಂಡಿಸಿದ್ದಾರೆ.
ಬಾಗಲಕೋಟೆಯ ಜಿಲ್ಲಾಧಿಕಾರಿಗಳ ಸರ್ಕಲ್ ನಲ್ಲಿ ನಡೆದ ಪ್ರತಿಭಟನೆ ವೇಳೆ ರಾಜ್ಯಪಾಲರ ಪ್ರತಿಕೃತಿ ದಹನದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅಭಿಮಾನಿ ದ್ಯಾಮಪ್ಪ ಎಂಬುವರಿಗೆ ಬೆಂಕಿ ತಗುಲಿದ್ದು, ಮುಖ,ಎದೆ, ಭುಜಕ್ಕೆ ಸುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.







