Breaking News :

ಮಂಗಳೂರಿನಲ್ಲಿ ಸಕ್ರಿಯವಾಗಿದ್ದ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಗ್ಯಾಂಗ್; ಕರಾವಳಿಗರಿಗೆ ಶಾಕಿಂಗ್ ಸುದ್ದಿ

ಖೋಟಾ ನೋಟು ಮುದ್ರಿಸಿ ಮಂಗಳೂರಿನಲ್ಲಿ ಚಲಾವಣೆ ಮಾಡುತ್ತಿದ್ದ ತಂಡವನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾಸರಗೋಡಿನ ಕೊಳತ್ತೂರು ನಿವಾಸಿ ಪ್ರಿಯೇಶ್(38), ಮುಳಿಯಾರು ವಿನೋದ್ ಕುಮಾರ್ (33), ಕುನಿಯಾ ಅಬ್ದುಲ್ ಖಾದರ್ (58), ಬೆಳಿಯೂರು ಕಟ್ಟೆಯ ಅಯೂಬ್ ಖಾನ್(51) ಬಂಧಿತ ಆರೋಪಿಗಳು.

ಕಾಸರಗೋಡು ಜಿಲ್ಲೆಯಲ್ಲಿ 500 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಮುದ್ರಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಪರಿಸರದ ಲಾಡ್ಜ್ ವೊಂದರ ಪರಿಸರದಲ್ಲಿ ಚಲಾವಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ 500 ರೂ. ಮುಖಬೆಲೆಯ ಖೋಟಾ ನೋಟು ಚಲಾವಣೆ ಜಾಲದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ 2,13,500 ರೂ. ಮೌಲ್ಯದ 500 ರೂ. ಮುಖಬೆಲೆಯ 427 ಖೋಟಾ ನೋಟುಗಳು, ಹಾಗೂ 4 ಮೊಬೈಲ್ ಫೋನುಗಳನ್ನು ವಶಪಡಿಸಿಕೊಳ್ಳಲಾಗಿದೆ.

 

Share this article

ಟಾಪ್ ನ್ಯೂಸ್

More News