Breaking News :

ವಾಲ್ಮಿಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ; ಚಾರ್ಜ್ ಶೀಟ್ ನಲ್ಲಿ ಸ್ಪೋಟಕ ಅಂಶಗಳು ಉಲ್ಲೇಖ

ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಶಿವಮೊಗ್ಗ ಕೋರ್ಟ್ ಗೆ 300ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ವರದಿಯಲ್ಲಿ ಮಹತ್ವದ ಅಂಶಗಳು ಉಲ್ಲೇಖಿಸಲಾಗಿದೆ.

ಚಂದ್ರಶೇಖರ್ ಅವರು ಒತ್ತಡದಿಂದ ಮತ್ತು ಭಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಐಡಿ ಅಧಿಕಾರಿಗಳು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಚಂದ್ರಶೇಖರ್ ಆತ್ಮಹತ್ಯೆಗೆ ನಿಗಮದ ಎಂ.ಡಿ. ಪದ್ಮನಾಭನ್ ಮತ್ತು ಪರಶುರಾಮ್ ಕಾರಣ ಎಂದು ಚಾರ್ಜ್ ಶೀಟ್ ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಚಂದ್ರಶೇಖರ್ ಅವರು ಕೂಡ ನಿಗಮದ ಹಗರಣದಲ್ಲಿ ಹಣವನ್ನು ಪಡೆದಿದ್ದರು ಎಂದು ಹೇಳಲಾಗಿದೆ.

ಚಂದ್ರಶೇಖರ್ ಅವರನ್ನು ಗೋವಾ ಮತ್ತು ಹೈದ್ರಾಬಾದ್ ಗೆ ಕರೆದುಕೊಂಡು ಹೋದ ಪದ್ಮನಾಭ ಮತ್ತು ಪರಶುರಾಮ್ ಅವರು ಬೆದರಿಕೆ ಹಾಕಿದ್ದರು. ನೀನು ಹಣ ಪಡೆದಿದ್ದೀಯಾ ಪ್ರಕರಣ ಬೆಳಕಿಗೆ ಬಂದರೆ ನೀನು ಜೈಲಿಗೆ ಹೋಗ್ತಿಯಾ ಎಂದು ಬೆದರಿಕೆ ಹಾಕಿದ್ದರು. ನಿನ್ನ ವಿರುದ್ಧ ನಾವೇ ದೂರು ಕೊಡ್ತೀವಿ. ಹೀಗಾಗಿ ಪ್ರಕರಣ ಬೆಳಕಿಗೆ ಬಂದು ಸಿಕ್ಕಿಬೀಳುವ ಭಯಕ್ಕೆ ಒಳಗಾದ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಚಾರ್ಜ್‌ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

Share this article

ಟಾಪ್ ನ್ಯೂಸ್

More News