Breaking News :

ಅನಾಥ ಯುವತಿಗೆ ಮುಂದೆ ನಿಂತು ವಿವಾಹ ಮಾಡಿಸಿಕೊಟ್ಟ ಉಡುಪಿ ಡಿಸಿ

ಅನಾಥೆಯಾಗಿದ್ದ ವಧುವನ್ನು ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಮುಂದೆ ನಿಂತು ಶಾಸ್ತ್ರೋಕ್ತವಾಗಿ ಕನ್ಯಾದಾನ ಮಾಡಿದ್ದಾರೆ.

15 ವರ್ಷಗಳಿಂದ ಅನಾಥೆಯಾಗಿ ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಆಶ್ರಯ ಪಡೆದುಕೊಂಡಿದ್ದ ಖುಷ್ಬು ಸುಮೇರಾ (21) ಅವರನ್ನು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಅಂಬುತೀರ್ಥದ ದಿನೇಶ್ ಎ.ಪಿ.ಅವರ ಪುತ್ರ ಕೃಷಿಕ ಹಾಗೂ ಕೇಟರಿಂಗ್ ಉದ್ಯಮ ನಡೆಸುವ ಮಧುರಾಜ್ ಎ.ಡಿ.(29) ಅವರು ಹಿಂದೂ ಸಂಪ್ರದಾಯದಂತೆ ವಿವಾಹವಾದರು.

ಉಡುಪಿ ಸಮೀಪದ ನಿಟ್ಟೂರಿನಲ್ಲಿರುವ ರಾಜ್ಯ ಮಹಿಳಾ ನಿಲಯದಲ್ಲಿ ವಿವಾಹ ಕಾರ್ಯಕ್ರಮ ನಡೆದಿದ್ದು, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಶುಭಮುಹೂರ್ತದಲ್ಲಿ ಮುಂದೆ ನಿಂತು ಶಾಸ್ತ್ರೋಕ್ತವಾಗಿ ಕನ್ಯಾದಾನ ಮಾಡಿದರು.

ಜಿಲ್ಲಾಡಳಿತದ ನೇತೃತ್ವದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಮಹಿಳಾ ನಿಲಯದ ಸಹಯೋಗದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ಗಣ್ಯರು ಹಾಗೂ ಮಹಿಳಾ ನಿಲಯದ ಸಹ ನಿವಾಸಿನಿಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಖುಷ್ಬು ಸುಮೇರಾ ಮೂಲತಃ ರಾಜಸ್ಥಾನದ ಜೋದ್‌ಪುರದವರಾಗಿದ್ದು,ಅನಾಥೆಯಾಗಿ 6 ವರ್ಷವಿರುವಾಗ ಬಾಲಮಂದಿರ ಸೇರಿದ್ದರು.ಕಳೆದ ಮೂರು ವರ್ಷಗಳಿಂದ ಮಹಿಳಾ ನಿಲಯದಲ್ಲಿ ವಾಸವಾಗಿದ್ದಾರೆ.

Share this article

ಟಾಪ್ ನ್ಯೂಸ್

More News