Breaking News :

ಕಾರ್ಕಳ ಅತ್ಯಾಚಾರ ಪ್ರಕರಣ; ಸಂತ್ರಸ್ತೆಯ ವೈದ್ಯಕೀಯ ವರದಿಯಲ್ಲೇನಿದೆ?

ಕಾರ್ಕಳದಲ್ಲಿ ಅತ್ಯಾಚಾರಕ್ಕೆ ಒಳಗಾದ ಯುವತಿಯ ರಕ್ತ ಪರೀಕ್ಷೆಯ ವರದಿ ಬಂದಿದ್ದು, ಆಕೆಯ ರಕ್ತದ ಮಾದರಿಯಲ್ಲಿ ಡ್ರಗ್ಸ್‌ ಅಂಶ ಪತ್ತೆಯಾಗಿದೆ.

ಮೊದಲ ಆರೋಪಿ ಅಲ್ತಾಫ್‌ನ ರಕ್ತಪರೀಕ್ಷೆಯ ವರದಿ ಹಾಗೂ ಬಿಯರ್ ಬಾಟಲ್ ತಂದುಕೊಟ್ಟ ಎರಡನೇ ಆರೋಪಿ ಕ್ಸೇವಿಯರ್ ರಿಚರ್ಡ್‌ನ ರಕ್ತ ಪರೀಕ್ಷೆಯ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ತಿಳಿಸಿದ್ಸಾರೆ.

ಯುವತಿಯ ರಕ್ತದ ಮಾದರಿ ಪರೀಕ್ಷೆಯಲ್ಲಿ ಡ್ರಗ್ಸ್‌ ಅಂಶ ಪತ್ತೆಯಾಗಿರುವ ಕಾರಣ ಆರೋಪಿ ಅಲ್ತಾಫ್‌ನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದಾಗ, ಆತ ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿ ‘ಇದನ್ನೇ ಆ ಹುಡುಗಿಗೆ ನೀಡಿದ್ದು’ ಎಂದು ಹೇಳಿದ್ದಾನೆ ಎಂದೂ ವಿವರಿಸಿದ್ದಾರೆ. ‘ಆ ಪುಡಿಯನ್ನು ನಾವು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ, ಅದು ಯಾವ ಮಾದಕ ದ್ರವ್ಯ ಎಂಬುದನ್ನು ದೃಢೀಕರಿಸುತ್ತೇವೆ ಮತ್ತು ಅದನ್ನೇ ಹುಡುಗಿಗೆ ನೀಡಲಾಗಿತ್ತೇ ಎಂಬುದರ ಬಗ್ಗೆ ಕೂಡ ತನಿಖೆ ನಡೆಸುತ್ತೇವೆ’ ಎಂದು ಎಸ್‌ಪಿ ತಿಳಿಸಿದ್ದಾರೆ.

ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಈ ಮಾದಕದ್ರವ್ಯವನ್ನು ಎಲ್ಲಿಂದ ಪಡೆದಿದ್ದಾರೆ ಮತ್ತು ಇದು ಎಲ್ಲಿಂದ ಬಂದಿದೆ ಎನ್ನುವುದರ ಬಗ್ಗೆ ತನಿಖೆ ನಡೆಯಲಿದೆ ಎಂದಿದ್ದಾರೆ.

Share this article

ಟಾಪ್ ನ್ಯೂಸ್

More News