Breaking News :

ಉಪ್ಪಿನಂಗಡಿ: ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯ ಅರೆಸ್ಟ್

ಉಪ್ಪಿನಂಗಡಿ: ರಸ್ತೆ ಕನ್ ಸ್ಟ್ರಕ್ಷನ್ ಕಂಪೆನಿಗೆ ಸೇರಿದ 40 ಕಬ್ಬಿಣದ ಪ್ಲೇಟ್ ಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಅಂತರ್ ಜಿಲ್ಲಾ ಕಳ್ಳ ಹಾಗೂ ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕಡಬ ತಾಲೂಕು ಐತ್ತೂರು ಗ್ರಾಮದ ಕಾರ್ಯತಡ್ಕ ನಿವಾಸಿ ಅಬ್ದುಲ್ ಹಮೀದ್ ಅಲಿಯಾಸ್ ಹಮೀದ್(27) ಎಂದು ಗುರುತಿಸಲಾಗಿದೆ. ಈತ 10ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ರಾಜ್ಯದ ವಿವಿಧ ಠಾಣೆಯ ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ.

ಆರೋಪಿಯು ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಪರಿಯಶಾಂತಿ, ಬೆದ್ರೋಡಿ ನೀರಕಟ್ಟೆ ಎಂಬಲ್ಲಿ ಕಳೆದ ವರ್ಷ ಹಾಗೂ ಈ ವರ್ಷ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿ ಗೊಂಡಿರುತ್ತಾನೆ. ಅಲ್ಲದೇ 10-10-2023 ರಂದು ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಹೆದ್ದಾರಿ 75ರ ಅಗಲೀಕರಣ ಕಾಮಗಾರಿಗೆ ಉಪಯೋಗಿಸುವ ಕೆ.ಎನ್. ಆರ್ ಸಂಸ್ಥೆಯ ಕಬ್ಬಿಣದ ಸೀಟ್ ಗಳನ್ನು ಕಳ್ಳತನ ಮಾಡಿರುತ್ತಾನೆ.

ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಸೇರಿದಂತೆ 10ಕ್ಕೂ ಅಧಿಕ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Share this article

ಟಾಪ್ ನ್ಯೂಸ್

More News