Breaking News :

ಪ್ರೀತಿ ನಿರಾಕರಿಸಿದ ಮಂಗಳಮುಖಿ ಹನೀಷಾಗೆ ಚೂರಿಯಿಂದ ಇರಿದ ಆದಿಲ್

ಪ್ರೀತಿ ನಿರಾಕರಿಸಿದ ಮಂಗಳಮುಖಿಗೆ ಯುವಕನೊರ್ವ ಚಾಕುವಿನಿಂದ ಇರಿದಿದ್ದಾನೆ. ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಹಿಡಿದು ಆತನಿಗೆ ಪೊಲೀಸರಿಗೆ ಒಪ್ಪಿಸಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದಲ್ಲಿ ನಡೆದಿದೆ.

ಹನೀಷಾ(21) ಚಾಕುವಿನಿಂದ ಇರಿತಕ್ಕೊಳಗಾದ ಮಂಗಳಮುಖಿಯಾಗಿದ್ದಾರೆ. ಮಂಡ್ಯದ ಆದಿಲ್‌ (23) ಚಾಕುವಿನಿಂದ ಇರಿದ ಆರೋಪಿಯಾಗಿದ್ದಾನೆ.

ಇವರಿಬ್ಬರು ಕಳೆದ ಆರು ತಿಂಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಹನೀಷಾ ಲಿಂಗತ್ವ ಅಲ್ಪಸಂಖ್ಯಾತರ ಕಾರ್ಯಕ್ರಮಗಳ ನಿಮಿತ್ತ ಬೇರೆ- ಬೇರೆ ಊರುಗಳಿಗೆ ಆಗಾಗ ಹೋಗುತ್ತಿದ್ದರು. ಇದನ್ನು ಸಹಿಸದ ಆದಿಲ್‌ ಆಕ್ಷೇಪ ವ್ಯಕ್ತಪಡಿಸಿ ಹಲ್ಲೆ ನಡೆಸುತ್ತಿದ್ದ. ಇದರಿಂದ ಬೇಸತ್ತು ಹನೀಷಾ ಪ್ರೇಮ ನಿರಾಕರಿಸಿದ್ದಳು.

ಈ ಹಿನ್ನೆಲೆಯಲ್ಲಿ ಬುಧವಾರ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಸಿಟ್ಟಿನಲ್ಲಿ ಆದಿಲ್‌ ಚಾಕುವಿನಿಂದ ಇರಿದಿದ್ದಾನೆ. ಗಾಯಾಳು ಹನೀಷಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಈ ಬಗ್ಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.



Share this article

ಟಾಪ್ ನ್ಯೂಸ್

More News