Breaking News :

ಬರೊಬ್ಬರಿ 50ಕ್ಕೂ ಅಧಿಕ ಪ್ರಕರಣಗಳ ಆರೋಪಿ ಕುಖ್ಯಾತ ರೌಡಿ ಶೀಟರ್ ಅರೆಸ್ಟ್

ಬೆಂಗಳೂರು: ಕುಖ್ಯಾತ ರೌಡಿಶೀಟರ್ ಬ್ಯಾಟರಿ ಜಯಂತ್ ನನ್ನು ಪೊಲೀಸರು ಬಂಧಿಸಿದ್ದು, 3 ಬೈಕ್ ಗಳು, ಸೇರಿ ಮೊಬೈಲ್ ಜಪ್ತಿ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸರು ಕುಖ್ಯಾತ ರೌಡಿಶೀಟರ್ ಬ್ಯಾಟರಿ ಜಯಂತ್ ನನ್ನು  ಬಂಧಿಸಿದ್ದಾರೆ

ಬ್ಯಾಟರಿ ಜಯಂತ್ ವಿರುದ್ಧ ಕೊಲೆ, ಕೊಲೆಯತ್ನ, ದರೋಡೆ ಸೇರಿ ಬರೋಬ್ಬರಿ 56 ಪ್ರಕರಣಗಳಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಜಯಂತ್ ವಿರುದ್ಧ ಕೊಲೆ, ಕೊಲೆ ಯತ್ನ, ಕಳ್ಳತನ, ದರೋಡೆ ಸೇರಿದಂತೆ ಹಲವು ಪ್ರಕರಣಗಳಿವೆ. ಸದ್ಯ ಜಾಮೀನಿನ ಮೇಲೆ ಹೊರ ಬಂದಿದ್ದ. ಕಳ್ಳತನ ಪ್ರಕರಣದಲ್ಲಿ 2019ರಲ್ಲಿ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ, ವೀರನಂಜೀಪುರ ಅರಣ್ಯ ಪ್ರದೇಶದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಆಗ ಕೂಡ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು.

Share this article

ಟಾಪ್ ನ್ಯೂಸ್

More News