ಕೊಡಗು: ಜಿಲ್ಲಾಸ್ಪತ್ರೆಯಿಂದ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ
ಕೊಡಗು : ಜು.11 ರಂದು ಮಡಿಕೇರಿಯ ಜಿಲ್ಲಾಸ್ಪತ್ರೆಯಿಂದ ಕಾಣೆಯಾಗಿದ್ದ 37 ವರ್ಷದ ರಘು ಮೃತದೇಹ ಇಂದು ಸರ್ಕಾರಿ ಆಸ್ಪತ್ರೆಯ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸಮೀಪದ ನೀರಿನ ಹೊಂಡದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅರೇಕಾಡುವಿನಲ್ಲಿ ತನ್ನ ತಾಯಿಯೊಂದಿಗೆ ವಾಸವಾಗಿದ್ದ ಮೃತ ರಘು ಪತ್ನಿ ರಾಜೇಶ್ವರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.








