Breaking News :

ಕಂದಾಯ ಇಲಾಖೆಯ ಕೆಲವು ಮಸೂದೆಗಳಿಗೆ ತಿದ್ದುಪಡಿ ತರಲು ಶಾಸಕ ಪೊನ್ನಣ್ಣ ಮನವಿ

ಕೊಡಗು : ರಾಜ್ಯ ಸರಕಾರದ ಮಾನ್ಯ ಕಂದಾಯ ಸಚಿವರಾದ  ಕೃಷ್ಣ ಬೈರೇಗೌಡ ರವರನ್ನು, ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ವಿಕಾಸ ಸೌಧದ ಮಾನ್ಯ ಸಚಿವರ ಕೊಠಡಿಯಲ್ಲಿ ಭೇಟಿ ಮಾಡಿ, ಕಂದಾಯ ಇಲಾಖೆಯ ಕೆಲವು ಮಸೂದೆಗಳಿಗೆ ತಿದ್ದುಪಡಿ ತರುವಂತೆ ಮನವಿ ಸಲ್ಲಿಸಿದರು. ವಿಶೇಷವಾಗಿ, ಕೊಡಗಿನವರ ಜಮ್ಮಬಾಣೆಗೆ ಕಂದಾಯ ನಿಗದಿ, ಪಟ್ಟೇದಾರರ ಸಮಸ್ಯೆ ಮತ್ತು ಪಹಣಿ ಪತ್ರದಲ್ಲಿ P ನಂಬರ್ ಗಳ ಸಮಸ್ಯೆಯನ್ನ ನಿವಾರಣೆ ಮಾಡಲು ಸೂಕ್ತ ತಿದ್ದುಪಡಿಯನ್ನು ಕರ್ನಾಟಕ ಕಂದಾಯ ಕಾಯ್ದೆ 1964 ಕ್ಕೆ ತರಬೇಕೆಂದು ಮಾನ್ಯ ಕಂದಾಯ ಸಚಿವರಲ್ಲಿ ಮನವಿ ಮಾಡಲಾಯಿತು.

ಇದಕ್ಕೆ ಪೂರಕವಾಗಿ ಸ್ಪಂದಿಸಿದ ಮಾನ್ಯ ಕಂದಾಯ ಸಚಿವರು, ಮುಂಬರುವ ಮುಂಗಾರು ಅಧಿವೇಶನದಲ್ಲಿ ಅಗತ್ಯ ತಿದ್ದುಪಡಿಯನ್ನು ತರಲಾಗುವುದೆಂಬ ಭರವಸೆಯನ್ನು ನೀಡಿದರು.

Share this article

ಟಾಪ್ ನ್ಯೂಸ್

More News