Breaking News :

ಪತ್ರಕರ್ತರ ಸಂಘದಿಂದ ಕಥೆ ಹೇಳುವ ಸ್ಪರ್ಧೆ

ಮಡಿಕೇರಿ : ಕೊಡಗು ಜಿಲ್ಲಾ ಪತ್ರಕರ್ತರ ಸಂಘ ( ರಿ) ಸಹಯೋಗದಲ್ಲಿ ವಿರಾಜಪೇಟೆ ತಾಲೂಕು ಪತ್ರ ಕರ್ತರ ಸಂಘ ದಿಂದ *ಕಥೆ ಹೇಳುವ ಸ್ಪರ್ಧೆ* ಆಯೋಜಿಸಲಾಗಿದೆ. ಆಗಸ್ಟ್ 3 ರಂದು ಭಾನುವಾರ ‘ಕಥಾ ಸಮಯ’ ಎನ್ನುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಸ್ವರಚಿತ ಕಥೆ ವಾಚಿಸಲು ಮೂರರಿಂದ ಐದು ನಿಮಿಷ ಸಮಯದ ಅವಕಾಶವಿರುತ್ತದೆ.

ಎಲ್ಲಾ ವಯೋಮಾನದವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.

ವಿರಾಜಪೇಟೆ ತಾಲೂಕಿನ ಕಾವಾಡಿ ಗ್ರಾಮದ ಕಾಮಧೇನು ಗೋ ಶಾಲೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಆಸಕ್ತರು ತಮ್ಮ ಹೆಸರನ್ನು ಜುಲೈ 25 ರೊಳಗಾಗಿ ನೊಂದಾಯಿಸಿಕೊಳ್ಳಲು.

ಸಂಪರ್ಕಿಸಬೇಕಾದ ಸಂಖ್ಯೆಗಳು: 9353531976, +917760908774

Share this article

ಟಾಪ್ ನ್ಯೂಸ್

More News