ಕಾರ್ಮಿಕನ ಮೇಲೆ ಕಾಡಾನೆ ದಾಳಿ : ಓರ್ವ ಗಂಭೀರ
ಕೊಡಗು ಜಿಲ್ಲೆಯ ಸಿದ್ದಾಪುರ ವ್ಯಾಪ್ತಿಯಲ್ಲಿ ಮುಂದುವರೆದ ಕಾಡಾನೆ ದಾಳಿ
ಬೆಳ್ಳಂ ಬೆಳಗ್ಗೆ ಕಾರ್ಮಿಕನ ಮೇಲೆ ಕಾಡಾನೆ ಅಟ್ಯಾಕ್
ಸಿದ್ದಾಪುರ ಬಳಿಯ ಇವಾಲ್ವ್ ಬ್ಯಾಕ್ ರೆಸಾರ್ಟ್ ಮಾಲೀಕತ್ವದ ಶಿಲ್ಪಿ ಎಸ್ಟೇಟ್ ನಲ್ಲಿ ನಡೆದ ಘಟನೆ
ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಕಾರ್ಮಿಕರ ಮೇಲೆ ಏಕಾಏಕಿ ದಾಳಿಗೆ ಮುಂದಾದ ಕಾಡಾನೆ.
ಕಾರ್ಮಿಕನೋರ್ವನ ತಲೆ ಹಾಗೂ ಎದೆಯ ಭಾಗಕ್ಕೆ ಗಂಭೀರ ಪೆಟ್ಟಾಗಿದ್ದು , ಮತ್ತೋರ್ವನಿಗೆ ಕಾಲಿಗೆ ಪೆಟ್ಟಾಗಿದೆ.
ಮೂಲತಃ ಬಾಗಲಕೋಟೆ ನಿವಾಸಿ ಪ್ರವೀಣ್ (30) ಹಾಗೂ ಶಿಲ್ಪಿ ತೋಟದ ಖಾಯಂ ಕಾರ್ಮಿಕ ರಘು (42) ಎಂಬುವವರೇ ಆನೆ ದಾಳಿಗೆ ಒಳಗಾದವರು.
ಗಾಯಾಳುಗಳನ್ನು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಪ್ರಥಮ ಚಿಕಿತ್ಸೆ ನೀಡಲಾಗಿದೆ
ಗಂಭೀರ ಗಾಯಗೊಂಡಿದ್ದ ಪ್ರವೀಣ್ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತೆಗೆ ರವಾನೆ ಮಾಡಲಾಗಿದೆ
ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ.
*Janavahini News Breaking*









