ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆ : ಅರ್ಥಪೂರ್ಣ ಆಚರಣೆಗೆ ಕೊಡಗು ಜಿಲ್ಲಾಡಳಿತ ನಿರ್ಧಾರ
ಮಡಿಕೇರಿ :* ಪ್ರತಿ ವರ್ಷದಂತೆ ಈ ಬಾರಿಯೂ ಆ.15 ರಂದು ನಗರದ ಕೋಟೆ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಕೊಡಗು ಜಿಲ್ಲಾಡಳಿತ ನಿರ್ಧರಿಸಿದೆ.
ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಕಳೆದ ಬಾರಿಯಂತೆ ಸ್ವಾಗತ, ಧ್ವಜಾರೋಹಣ, ವೇದಿಕೆ, ಕವಾಯತ್ತು ಉಪಹಾರ, ಭಾಷಣ, ಬಹುಮಾನ ಹೀಗೆ ವಿವಿಧ ಆಯಾಯ ಉಪ ಸಮಿತಿಗಳು ತಮ್ಮ ಕೆಲಸಗಳನ್ನು ಚಾಚು ತಪ್ಪದೆ ನಿರ್ವಹಿಸುವಂತೆ ತಿಳಿಸಿದರು.
ಧ್ವಜಾರೋಹಣ ಸಂಬಂಧ ಅಗತ್ಯ ತಯಾರಿ ಮಾಡಿಕೊಳ್ಳುವುದು. ಹಾಗೆಯೇ ವೇದಿಕೆ ಸಮಿತಿಯವರು ವಾಟರ್ ಪ್ರೂಫ್ ಶಾಮಿಯಾನ ನಿರ್ಮಾಣ ಮಾಡುವಂತೆ ಮತ್ತು ಉಪಹಾರ ಸಮಿತಿಯವರು ವಿದ್ಯಾರ್ಥಿಗಳಿಗೆ ಬೆಳಗ್ಗಿನ ಉಪಾಹಾರ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಹಾಗೆಯೇ ನೀಟ್, ಐಎಟಿ, ಸಿಇಟಿ, ಕ್ರೀಡೆ, ಕೃಷಿ ಮತ್ತಿತರ ಕ್ಷೇತ್ರದಲ್ಲಿ ನಮ್ಮ ಜಿಲ್ಲೆಯಿಂದ ಸಾಧನೆ ಮಾಡಿದವರಿಗೆ ಗೌರವವಿಸುವುದಾಗಿ ತಿಳಿಸಿದರು.
ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಯೋಜಿಸಲು ಎಲ್ಲಾ ಅಧಿಕಾರಿಗಳು ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಕೈಜೋಡಿಸಬೇಕು. ಗಣ್ಯರನ್ನು ಆಹ್ವಾನಿಸುವುದು ಸೇರಿದಂತೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ಪ್ರಶಸ್ತಿ ಹಾಗೂ ಯಾವ ಯಾವ ಕ್ಷೇತ್ರದಲ್ಲಿ ಅವರು ಸಾಧನೆ ಮಾಡಿದ್ದಾರೆ ಎಂಬ ವಿಷಯವನ್ನು ಆ.5 ರೊಳಗಾಗಿ ಕಚೇರಿಗೆ ಸಲ್ಲಿಸುವಂತೆ ಸೂಚಿಸಿದರು. ಸ್ವಾತಂತ್ರ್ಯ ದಿನಾಚರಣೆಯಲ್ಲಿ ಎಲ್ಲಾ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದರು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.








