ಅಗಲಿದ ಜನ ನಾಯಕ ವಿ.ಎಸ್. ಅಚ್ಯುತಾನಂದನ್ ರಿಗೆ ಕೊಡಗಿನಲ್ಲಿ ಶ್ರದ್ಧಾಂಜಲಿ
ಮಡಿಕೇರಿ : ಅಗಲಿದ ಹಿರಿಯ ಕಮ್ಯೂನಿಷ್ಟ್ ನಾಯಕ. ಮಾಜಿ ಕೇರಳ ಮುಖ್ಯಮಂತ್ರಿ ವಿ.ಎಸ್.ಅಚ್ಯುತಾನಂದನ್ ಅವರಿಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಕೊಡಗು ಜಿಲ್ಲಾ ಸಮಿತಿ ವತಿಯಿಂದ ಸಿದ್ದಾಪುರದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.
ಸಿದ್ದಾಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ನಾನಾ ಕಡೆಗಳಿಂದ ಆಗಮಿಸಿದ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡು ಹಿರಿಯ ನಾಯಕನ ಭಾವಚಿತ್ರಕ್ಕೆ ಪುಷ್ಪ ನಮನ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು
ಈ ಸಂದರ್ಭ ಮಾತನಾಡಿದ ಪಕ್ಷದ ಪ್ರಮುಖರು ದುಡಿಯುವ ವರ್ಗಗಳ ಆಧಾರ ಸ್ತಂಭವಾಗಿದ್ದ ಸಿಪಿಎಂನ ಹಿರಿಯ ನಾಯಕ ವಿ.ಎಸ್.ಅಚ್ಯುತಾನಂದನ್ ಅವರು ಶಾರೀರಿಕವಾಗಿ ನಮ್ಮಿಂದ ದೂರವಾಗಿರಬಹುದು. ಆದರೆ ಅವರು ಬಿಟ್ಟು ಹೋಗಿರುವ ಅವರ ಆದರ್ಶ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಕೊಂಡು ಮುಂದುವರೆದರೆ ಅದುವೇ ಅವರಿಗೆ ನೀಡುವ ನಿಜವಾದ ಶ್ರದ್ಧಾಂಜಲಿ ಎಂದು ನುಡಿದರು.
ಪಕ್ಷದ ಜಿಲ್ಲಾ ಕಾರ್ಯದರ್ಶಿ ರಮೇಶ್.ಎಚ್ ಬಿ, ಜಿಲ್ಲಾ ಸಮಿತಿ ಸದಸ್ಯರು ಎ.ಸಿ.ಸಾಬು, ಎನ್.ಡಿ ಕುಟ್ಟಪ್ಪ, ಪಿಆರ್ ಭರತ್ ,ಶಾಜೀ ರಮೇಶ್, ಪದ್ಮಿನಿ ಶ್ರೀಧರ್ ,ಡಾಕ್ಟರ್ ದುರ್ಗಾ ಪ್ರಸಾದ್, ಎಸ್ ಬೈಜು, ಮಹದೇವ, ಶಾಖಾ ಕಾರ್ಯದರ್ಶಿಗಳು, ಪಕ್ಷದ ಸದಸ್ಯರು, ಹಿತೈಷಿಗಳು ಮತ್ತು ಸಿದ್ದಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಪ್ರೇಮ ಗೋಪಾಲ್, ಸದಸ್ಯರುಗಳು ಅಬಿತ, ಅಬ್ದುಲ್ ಶುಕೂರ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಎಂ ಎಸ್ ವೆಂಕಟೇಶ್ ಇನ್ನಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.








