ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ಆಹ್ವಾನ
ಬೆಂಗಳೂರು : ಸೆಪ್ಟೆಂಬರ್ ಒಂದರಿಂದ ತಿಂಗಳಾವಧಿಗೆ ಜರುಗಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭಕ್ಕೆ, ಲಿಂಗಾಯಿತ ಮಠದಿಪತಿಗಳ ಒಕ್ಕೂಟದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರನ್ನು ಆಹ್ವಾನಿಸಲಾಯಿತು.
ಅಕ್ಟೋಬರ್ ಐದರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ರವರ ನೇತೃತ್ವದಲ್ಲಿ ಸುಮಾರು ಹತ್ತಕ್ಕೂ ಅಧಿಕ ಪೀಠಾಧಿಪತಿಗಳು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿಯಾದರು. ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಶ್ರೀ ಎ.ಎಸ್ ಪೊನ್ನಣ್ಣರವರನ್ನು ಆಹ್ವಾನಿಸಲಾಯಿತು.








