Breaking News :

ಈ ಬಾರಿಯ mysore ದಸರಾದಲ್ಲಿ ಯಾವೆಲ್ಲಾ ಆನೆಗಳು ಭಾಗವಹಿಸುತ್ತೆ ಗೊತ್ತಾ.!? ಇಲ್ಲಿದೆ ನೋಡಿ ಸಪೂರ್ಣ ಮಾಹಿತಿ

ಈ ಬಾರಿಯ (mysore Dasara) ದಸರಾದಲ್ಲಿ ಯಾವೆಲ್ಲಾ ಆನೆಗಳು ಭಾಗವಹಿಸುತ್ತೆ ಗೊತ್ತಾ.!? ಇಲ್ಲಿದೆ ನೋಡಿ ಸಪೂರ್ಣ ಮಾಹಿತಿ

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯ 2025 ನೇ ಮೊದಲ ಹಂತದ ಗಜಪಡೆಯ ಆಯ್ಕೆ ಪಟ್ಟಿಯನ್ನು ಅರಣ್ಯ ಇಲಾಖೆ ಬಿಡುಗಡೆ ಮಾಡಿದೆ. ಈ ಬಾರಿಯು ಗಜಪಡೆಯ ಕ್ಯಾಪ್ಟನ್ ಆಗಿ ಅಭಿಮನ್ಯು ಹೊರಹೊಮ್ಮಿದ್ದಾನೆ. ದಸರಾಗೆ ಗಜ ಪಡೆಯನ್ನು ಕಟ್ಟುವುದಕ್ಕೆ ಅರಣ್ಯ ಇಲಾಖೆ ಕಳೆದೊಂದು ತಿಂಗಳಿನಿಂದ ಹುಡುಕಾಟ ನಡೆಸಿದ್ದು, ಕೊನೆಗೂ ಮೊದಲ ಹಂತದಲ್ಲಿ 9 ಆನೆಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ.

ಗಜಪಡೆಯ ಕ್ಯಾಪ್ಟನ್ ಅಭಿಮನ್ಯು

ಎಲ್ಲರ ನಿರೀಕ್ಷೆಯಂತೆ ಈ ಬಾರಿಯೂ ಅಭಿಮನ್ಯು ಗಜಪಡೆಯ ಕ್ಯಾಪ್ಟನ್ ಆಗಿ ದಸರಾ ಜಂಬೂ ಸವಾರಿಯಲ್ಲಿ ಚಿನ್ನದ ಅಂಬಾರಿಯನ್ನು ಹೊರಲಿದ್ದಾನೆ. ಮೊದಲ ಹಂತದ ಗಜಪಡೆಯನ್ನು ಆಗಸ್ಟ್ 4 ರಂದು ಹುಣಸೂರು ಬಳಿಯ ವೀರನಹೊಸಳ್ಳಿಯಿಂದ ವಿದ್ಯುಕ್ತವಾಗಿ ಗಜಪಯಣಕ್ಕೆ ಚಾಲನೆ ನೀಡಿ ಮೈಸೂರಿಗೆ ಬರಮಾಡಿಕೊಳ್ಳಲಾಗುತ್ತದೆ.

9 ಆನೆಗಳ ಪಟ್ಟಿ ಬಿಡುಗಡೆ

2025ನೇ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಒಟ್ಟು 14 ಆನೆಗಳ ಪೈಕಿ 9 ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಿ 2020 ರಿಂದ ವಿಜಯ ದಶಮಿಯ ದಿನದಂದು ಜಂಬೂಸವಾರಿಯಲ್ಲಿ ನಾಡದೇವಿ ಚಾಮುಂಡೇಶ್ವರಿ ವಿಗ್ರಹವಿರುವ ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯುವೇ ಕ್ಯಾಪ್ಟನ್ ಆಗಿ ಮುಂದುವರೆಸಿದ್ದಾರೆ.

ಕ್ಯಾಪ್ಟನ್ ಅಭಿಮನ್ಯು, 59 ವರ್ಷ, ನಾಗರಹೊಳೆಯ ಮತ್ತಿಗೋಡು ಶಿಬಿರ, ದಸರಾ ಅನುಭವ: 20 ವರ್ಷ
ಭೀಮ, 25 ವರ್ಷ, ಮತ್ತಿಗೋಡು ಶಿಬಿರ, ದಸರಾ ಅನುಭವ: 4 ವರ್ಷ
ಪ್ರಶಾಂತ, 53 ವರ್ಷ, ದುಬಾರೆ ಶಿಬಿರ, ದಸರಾ ಅನುಭವ: 15 ವರ್ಷ
ಮಹೇಂದ್ರ, 42 ವರ್ಷ, ಮತ್ತಿಗೋಡು ಶಿಬಿರ, ದಸರಾ ಅನುಭವ: 4 ವರ್ಷ
ಧನಂಜಯ, 45 ವರ್ಷ, ದುಬಾರೆ ಶಿಬಿರ, ದಸರಾ ಅನುಭವ: 7 ವರ್ಷ
ಕಂಜನ್, 26 ವರ್ಷ, ದುಬಾರೆ ಶಿಬಿರ, ದಸರಾ ಅನುಭವ: 2 ವರ್ಷ
ಏಕಲವ್ಯ, 40 ವರ್ಷ, ಮತ್ತಿಗೋಡು, ದಸರಾ ಅನುಭವ: 2 ವರ್ಷ
ಕಾವೇರಿ, 45 ವರ್ಷ, ದುಬಾರೆ ಶಿಬಿರ, ದಸರಾ ಅನುಭವ: 13 ವರ್ಷ
ಲಕ್ಷ್ಮಿ, 54 ವರ್ಷ, ಬಳ್ಳೆ ಆನೆ ಶಿಬಿರ , ದಸರಾ ಅನುಭವ: 2 ವರ್ಷ
ನಾಗರಹೊಳೆಯ ಮತ್ತಿಗೋಡು ಶಿಬಿರದಲ್ಲಿರುವ 59 ವರ್ಷದ ಅಭಿಮನ್ಯು 300ಕ್ಕೂ ಹೆಚ್ಚು ಆನೆ ಸೆರೆ ಕಾರ್ಯಾಚರಣೆ ಹಾಗೂ 80ಕ್ಕೂ ಹೆಚ್ಚು ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಪ್ರಮುಖ ಕುಮ್ಕಿ ಆನೆ ಎಂದೇ ಖ್ಯಾತನಾಗಿದ್ದಾನೆ. ಇವನ ಜೊತೆಗೆ ಮತ್ತಿಗೋಡು ಶಿಬಿರದ ಭೀಮ, ದುಬಾರೆ ಶಿಬಿರದ ಪ್ರಶಾಂತ, ಮತ್ತಿಗೋಡು ಶಿಬಿರದ ಮಹೇಂದ್ರ, ದುಬಾರೆ ಶಿಬಿರದ ಧನಂಜಯ, ಕಂಜನ್, ಮತ್ತಿಗೋಡು ಶಿಬಿರದ ಏಕಲವ್ಯ, ದುಬಾರೆ ಶಿಬಿರದ ಕಾವೇರಿ, ಬಳ್ಳೆ ಶಿಬಿರದ ಲಕ್ಷ್ಮೀ ಆನೆಗಳು ಮೊದಲ ಹಂತದಲ್ಲಿ ಮೈಸೂರಿಗೆ ಆಗಮಿಸಲಿವೆ. 2ನೇ ಹಂತದಲ್ಲಿ 5 ಆನೆಗಳು ಆಗಮಿಸಲಿವೆ.

Share this article

ಟಾಪ್ ನ್ಯೂಸ್

More News